ಎಸ್ ಡಿಪಿಐ ಜೊತೆ ಹೊಂದಾಣಿಕೆ ಮಾಡಿಲ್ಲ: ರಮಾನಾಥ್ ರೈ

ramanatha rai
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬಂಟ್ವಾಳ(07/11/2020): ಎಸ್.ಡಿ.ಪಿ.ಐ. ಜೊತೆ ಹೊಂದಾಣಿಕೆ ಎಂಬ ಆರೋಪ ನಿರಾಧಾರವಾದುದು.  ಕಾಂಗ್ರೆಸ್  ಸ್ಪರ್ಧಿಸಿದ ಎರಡೂ ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಇದರಲ್ಲಿ ಹೊಂದಾಣಿಕೆಯ ಮಾತು ಎಲ್ಲಿಂದ ಬಂತು ಎಂದು
ಮಾಜಿ ಸಚಿವ ಬಿ.ರಮಾನಾಥ್ ರೈ ಪ್ರಶ್ನಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಯ ಜೊತೆಗೆ ಮಾತನಾಡಿದ ಅವರು, ನಾನು ಶಾಸಕ ಮತ್ತು ಸಚಿವನಾಗಿದ್ದ ಸಂದರ್ಭದಲ್ಲಿ ಮಾಡಿದ ಕೆಲಸಕ್ಕೆ ಪ್ರತಿಫಲ ದೊರೆತಿದೆ. ನಮ್ಮ ಪುರಸಭೆ ವ್ಯಾಪ್ತಿಯಲ್ಲಿ ನೀರು, ವಿದ್ಯುತ್, ಸಾರಿಗೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದ ಫಲವೇ ಪುರಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿತ್ತು. ಹೆಚ್ಚು ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ ಎಂದರು.

ನಾವು ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಯಾರಾದರೂ ನಮ್ಮ ಅಭ್ಯರ್ಥಿಗಳನ್ನು  ಬೆಂಬಲಿಸಿದರೆ ಅದು ಅವರ ಇಷ್ಟ. ಅದನ್ನು ನಾವು ಬೇಡ ಎನ್ನಲಾಗುತ್ತದೆಯೇ ಎಂದರು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು