ಬಸವಕಲ್ಯಾಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣರಾವ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ಬಸವಕಲ್ಯಾಣ ಐತಿಹಾಸಿಕ ಕೋಟೆಯಿಂದ ಥೇರ್ ಮೈದಾನದ ವರೆಗೆ ಬೃಹತ್ ಬಹಿರಂಗ ಪ್ರಚಾರ ಆಯೋಜಿಸಲಾಗಿತ್ತು.
ಥೇರ್ ಮೈದಾನದಲ್ಲಿ ಆಯೋಜಿಸಿದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ್, ಜಮೀರ್ ಅಹಮದ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹಿರಿಯ ಮುಖಂಡರಾದ ಪಿ.ಜಿ.ಆರ್. ಸಿಂಧ್ಯಾ ಅವರನ್ನು ಕಾಂಗ್ರೆಸ್ ಮುಖಂಡರು ಪಕ್ಷಕ್ಕೆ ಬರಮಾಡಿಕೊಂಡು, ಶುಭ ಕೋರಿದರು.

ಎಪ್ರಿಲ್ 17ರಂದು ವಿಧಾನಸಭೆ ಉಪಚುನಾವಣೆ ಮತದಾನ ನಡೆಯಲಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು