ಕುಂದಾಪುರ(07-11-2020): ಕುಂದಾಪುರ ಪುರಸಭೆ ವ್ಯಾಪ್ತಿಯ ವಿವಿಧೆಡೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಭಿಕ್ಷಾಟನೆ ನಿರತ 11 ಮಂದಿ ಮಕ್ಕಳನ್ನು ರಕ್ಷಿಸಿದ್ದಾರೆ.
ಕುಂದಾಪುರದ ಸಂತೆ ಮಾರುಕಟ್ಟೆ, ಹೊಸ ಬಸ್ ನಿಲ್ದಾಣ, ಪೇಟೆ, ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಶಿರಸಿ ಮತ್ತು ಹಾವೇರಿ ಮೂಲದ 9 ಮಂದಿ ಬಾಲಕಿಯರು ಹಾಗೂ ಇಬ್ಬರು ಬಾಲಕರು ಸೇರಿದಂತೆ ಒಟ್ಟು 11 ಮಕ್ಕಳನ್ನು ರಕ್ಷಿಸಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ.
ಕಾರ್ಯಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಕುಂದಾಪುರ ಪುರಸಭೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ, ವಿಶ್ವಾಸದಮನೆ ಸಂಸ್ಥೆಗಳು ಸೇರಿವೆ.