ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ, ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವಿನ ಕಡೆಗೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಅಭ್ಯರ್ಥಿಗಳ ತೀರ್ಪು ಹೊರಬೀಳಲು ಕೆಲವೇ ಕ್ಷಣಗಳು ಬಾಕಿಯಿವೆ.

ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣ ಹಿನ್ನಡೆಯಲ್ಲಿದ್ದಾರೆ, ಜೆಡಿಎಸ್ ಅಭ್ಯರ್ಥಿ ಕೂಡ ಐದು ಸಾವಿರ ಮತಗಳಿಂದ ಹಿನ್ನಡೆಯಲ್ಲಿದ್ದಾರೆ.

ಇನ್ನೂ ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಹಿನ್ನಡೆಯಾಗಿದೆ, ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು ಗೆಲ್ಲುವ ಸಾಧ್ಯತೆ ಇದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿಯ ಮಂಗಳಾ ಅಂಗಡಿ ಅವರು ಸಮಬಲ ಸಾಧಿಸುತ್ತಿದ್ದಾರೆ. ಬಿಜೆಪಿಯ ಮಂಗಳಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ, ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಹಾಗೂ ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯತೆ ಇದ್ದು, ಇನ್ನೂ ಅಂತಿಮ ಸುತ್ತಿನ ಎಣಿಕೆ ನಡೆಯುತ್ತಿದೆ, 12 ರ ವರೆಗೆ ಮೂರು ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು