ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಬೆಳಗಾವಿ ಉಪ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಸುಮಾರು 2.50 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಇಂದು ಬೆಳಗಾವಿಯಲ್ಲಿ ಉಪಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ. ಬಿಜೆಪಿಯ ಹಲವು ಮುಖಂಡರು ಭಾಗಿಯಾಗಿದ್ದರು.
ನಿನ್ನೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದರು. ಇಂದು ಬಿಜೆಪಿಯಿಂದ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಸುರೇಶ್ ಅಂಗಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಎಪ್ರಿಲ್ 17 ರಂದು ಬೈ ಎಲೆಕ್ಷನ್ ಗೆ ಮತದಾನ ನಡೆಯಲಿದೆ. ಎರಡೂ ಪಕ್ಷಗಳು ಬಹಿರಂಗ ಪ್ರಚಾರ ಜೋರಾಗಿ ನಡೆಸುತ್ತಿವೆ.
ಬೆಳಗಾವಿ ಉಪ ಕದನದಲ್ಲಿ ಕಾಂಗ್ರೆಸ್ – ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೈ – ಕಮಲದ ನಡುವಿನ ಮಿನಿ ಸಮರದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದು ತುಂಬಾ ಕುತೂಹಲ ಮೂಡಿಸಿದೆ.