ಬೆಳಗಾವಿ ಬೈ ಎಲೆಕ್ಷನ್ : ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಶಾಸಕರು ಹಾಗೂ ಮುಖಂಡರಾದ ಎಂ.ಬಿ. ಪಾಟೀಲ, ಆರ್.ವಿ. ದೇಶಪಾಂಡೆ, ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಕೆಪಿಸಿಸಿ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ, ಮಾಜಿ ಶಾಸಕರಾದ ಪಿರೋಜ್ ಶೇಠ್, ಅಶೋಕ ಪಟ್ಟಣ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಎಪ್ರಿಲ್ 17 ರಂದು ಬೆಳಗಾವಿ ಉಪಚುನಾವಣೆಗೆ ಮತದಾನ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪ್ರತಿಸ್ಪರ್ಧಿಯಾಗಿ ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಸುರೇಶ್ ಅಂಗಡಿ ಅವರು ಬಿಜೆಪಿಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು