ಬೆಳಗಾವಿ(24-02-2021): ಕಿಕ್ಕಿರಿದ ಬಸ್ನಲ್ಲಿ ಪ್ರಯಾಣಿಕರ ಮಧ್ಯೆ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರಿನಲ್ಲಿ ನಡೆದಿದೆ.
ಖಾನಾಪುರ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ. ಒಂದೇ ಬಸ್ಸಿನಲ್ಲಿ ತುಂಬಿಸಿ ಕರೆದುಕೊಂಡು ಹೋಗಲಾಗುತ್ತಿದೆ. ಇದರಿಂದಾಗಿ ಕಿಕ್ಕಿರಿದ ಬಸ್ನಲ್ಲಿ ಪ್ರಯಾಣಿಕರ ಮಧ್ಯೆ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪಾಲಕರು ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.