ಜಿಲ್ಲಾಧಿಕಾರಿ ಕಚೇರಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಾರ್ಮಿಕ| ಪ್ರಹಸನಕ್ಕೆ ಸಾಕ್ಷಿಯಾದ ಡಿಸಿ ಕಚೇರಿ

belgavi dc
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ(11-12-2020): ವೇತನ ಸಿಕ್ಕಿಲ್ಲ ಎಂದು ಬೇಸತ್ತು ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದ ಮೇಲಿಂದ ಹಾರಿ ಕಾರ್ಮಿಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಕೇರಳ ಮೂಲದ ವಾಮದೇವನ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಇವರು ರಾಯಬಾಗದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ 6 ತಿಂಗಳಿನಿಂದ ವೇತನ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಇದರಿಂದ ಜೀವನ ನಿರ್ವಹಣೆಗೆ ದಾರಿಯಿಲ್ಲದೆ ವಾಮದೇವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ತಕ್ಷಣ ಎಚ್ಚೆತ್ತು ವಾಮದೇವನ್ ಅವರನ್ನು ರಕ್ಷಿಸಿದ್ದಾರೆ. ಬಳಿಕ ಅವರನ್ನು ಮಾರ್ಕೆಟ್ ಠಾಣೆ ಪೊಲೀಸರ ವಶಕ್ಕೆ ನೀಡಲಾಗಿದೆ.

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು