ನವದೆಹಲಿ(19-02-2021): ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ನಿಬಂಧನೆಗಳನ್ನು ಪರಿಶೀಲಿಸಲು ಆಗ್ರಹಿಸಿ ಫೆ.26 ರಂದು ಭಾರತ್ ಬಂದ್ ಗೆ ಅಖಿಲ ಭಾರತ ವರ್ತಕರ ಸಂಘಟನೆ ಕರೆ ನೀಡಿದೆ.
ಜಿಎಸ್ಟಿಯ ಕಠಿಣ ನಿಬಂಧನೆಗಳನ್ನು ಪರಿಶೀಲಿಸಬೇಕೆಂದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಜಿಎಸ್ಟಿ ಕೌನ್ಸಿಲ್ ಗಳಿಗೆ ಒತ್ತಾಯಿಸಿ ದೇಶದ ಪ್ರತಿಭಟನೆ ಧರಣಿ ನಡೆಸಲಾಗುವುದು ಎಂದು ಸಿಐಟಿಯು ತಿಳಿಸಿದೆ.
ವ್ಯಾಪಾರಿಗಳ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಮಾತನಾಡಿ,ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಜಿಎಸ್ಟಿಯನ್ನು ಸರಳೀಕರಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘ ಕೂಡ ಭಾರತ್ ಬಂದ್ ಕರೆಗೆ ಬೆಂಬಲ ನೀಡಿದೆ.