ಭಾರತದಿಂದ ಯುಎಇಗೆ ಹೋಗುವ ವಿಮಾನ ಪ್ರಯಾಣದ ಮೇಲಿನ ನಿಷೇಧ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಅಬುದಾಬಿ: ಭಾರತದಿಂದ ಯುಎಇಗೆ ಹೋಗುವ ವಿಮಾನ ಪ್ರಯಾಣಕ್ಕೆ ಹೇರಿರುವ ನಿಷೇಧವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ. ಭಾರತದಲ್ಲಿ ಕೋವಿಡ್ ಹರಡುವಿಕೆಯಲ್ಲಿ ಯಾವುದೇ ಇಳಿಕ ಕಂಡು ಬರದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮೊದಲು ತಿಂಗಳ ಹದಿನಾಲ್ಕರ ವರೆಗೆ ವಿಮಾನ ಪ್ರಯಾಣದ ಮೇಲಿನ ನಿಷೇಧ ಹೇರಿ ಆದೇಶ ಹೊರಡಿಸಲಾಗಿತ್ತು. ಇದೀಗ ಅದು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ ಎಂದು ಯುಎಇಯ ರಾಷ್ಟ್ರೀಯ ವಿಪತ್ತು ನಿವಾರಣಾ ಇಲಾಖೆ ಮತ್ತು ನಾಗರಿಕ ವಿಮಾನಯಾನ ಇಲಾಖೆಗಳು ಜಂಟಿಯಾಗಿ ಪ್ರಕಟಣೆ ಹೊರಡಿಸಿದೆ. ಇದರಿಂದಾಗಿ ಈಗಾಗಲೇ ಭಾರತದಲ್ಲಿ ಬಾಕಿಯಾಗಿರುವ ಲಕ್ಷಾಂತರ ಅನಿವಾಸಿಗಳಿಗೆ ಹೊಸ ಆತಂಕ ಎದುರಾಗಿದೆ.

ಜೊತೆಗೆ ಕಳೆದ ಹದಿನಾಲ್ಕು ದಿನಗಳೊಳಗೆ ಭಾರತದಲ್ಲಿ ತಂಗಿದವರಿಗೂ, ಈ ಅವಧಿಯಲ್ಲಿ ಭಾರತದ ಮೂಲಕ ಯುಎಇ ಬರುವ ಇತರ ದೇಶದವರಿಗೂ ಈ ನಿಷೇಧವು ಅನ್ವಯವಾಗುವುದು

ರಾಜತಾಂತ್ರಿಕರಿಗೆ, ಯುಎಇ ಪ್ರಜೆಗಳಿಗೆ ಮತ್ತು ಗೋಲ್ಡನ್ ವೀಸಾ ಹೊಂದಿರುವವರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಅಂಥವರು ಚಾರ್ಟರ್ಡ್ ವಿಮಾನ ಅಥವಾ ಖಾಸಗೀ ವಿಮಾನಗಳ ಮೂಲಕ ಯುಎಇ ಪ್ರವೇಶಿಸಬಹುದಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು