ನವದೆಹಲಿ – ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ ಮತ್ತೆ 22 ರಿಂದ 23 ಸಾವಿರ ಮಂದಿಗೆ ಕೊರೋನಾ ಪೊಸಿಟಿವ್ ಕಂಡಿದೆ.
ಕಳೆದ 78 ದಿನಗಳ ನಂತರ ದಾಖಲಾಗಿರುವ ಅತಿ ಹೆಚ್ಚು ಸೋಂಕಿತರು ಕಂಡುಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,13,08,846ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶಗಳು ಉಲ್ಲೇಖಿಸಿವೆ.
ನಿನ್ನೆಯಿಂದ ಇಂದಿನವರೆಗೆ ಕೊರೋನಾಗೆ 117 ಮಂದಿ ಬಲಿಯಾಗುವ ಮೂಲಕ ಇದುವರೆಗೂ ಮೃತಪಟ್ಟವರ ಸಂಖ್ಯೆ 1,58,306ಕ್ಕೆ ಏರಿಕೆಯಾಗಿದೆ. ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಲಸಿಕೆ ನೀಡಲಾಗುತ್ತಿದೆ.
ಇದುವರೆಗೂ ದೇಶದಲ್ಲಿ 20 ಕೋಟಿಯಷ್ಟು ಮಂದಿಗೆ ಲಸಿಕೆ ಹಾಕಲಾಗುತ್ತಿದೆ.
ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ಹಾಕಿಸಲಾಗುತ್ತಿದೆ. ಆದರೂ ಸೋಂಕು ಹೆಚ್ಚಳಗೊಳ್ಳುತ್ತಿರುವುದು ಜನರಿಲ್ಲಿ ಭೀತಿಯನ್ನುಂಟು ಮಾಡಿದೆ.