ಪುತ್ತೂರು:  ಕಾಮಗಾರಿ ವೇಳೆ ಭೂಕುಸಿತ ಇಬ್ಬರು ಕಾರ್ಮಿಕರ ದಾರುಣ ಸಾವು

puttur news
Share on facebook
Share on twitter
Share on linkedin
Share on whatsapp
Share on telegram
Share on email
Share on print

ಪುತ್ತೂರು: ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಅರ್ಲಪದವು  ಸಮೀಪದ ಕಡಮ್ಮಾಜೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಕಡಮ್ಮಾಜೆ ಹಾಜಿ ಅಬ್ದುಲ್ಲ ಎಂಬವರಿಗೆ ಸೇರಿದ ಕೋಳಿ ಫಾರ್ಮ್ ನ ತ್ಯಾಜ್ಯ ವಿಲೇವಾರಿಗೆ ಜೆಸಿಬಿ ಮೂಲಕ ಹೊಂಡ ತೆಗೆಯಲಾಗುತ್ತಿತ್ತು.  ಈ ವೇಳೆ ಇಬ್ಬರು ಕಾರ್ಮಿಕರು ಆಕಸ್ಮಿಕವಾಗಿ ಹೊಂಡದ ಒಳಗೆ ಬಿದ್ದಿದ್ದು, ಅವರ ಮೇಲೆಯೇ ಮಣ್ಣು ಬಿದ್ದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು  ಕಾರ್ಮಿಕರು ಕೂಡ ಮೃತಪಟ್ಟಿದ್ದಾರೆ.

ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂಬವರು ಹೊಂಡದೊಳಗೆ ಬಿದ್ದು ಮೃತಪಟ್ಟ ಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ಕಾರ್ಮಿಕರನ್ನು ಮಣ್ಣಿನಿಂದ ಹೊರಗೆ ತೆಗೆಯಲು ಪ್ರಯತ್ನಿಸಿದ್ದಾರೆ.  ಆದರೆ ಅದಾಗಲೇ ಕಾರ್ಮಿಕರು ಮೃತಪಟ್ಟಿದ್ದಾರೆ.

ಕಾರ್ಮಿಕರ ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು