ಬೀದರ್ ಆಸ್ಪತ್ರೆಯಲ್ಲಿ ಬೆಡ್ ಕೊರತೆ : ಫುಟ್ ಪಾತ್ ನಲ್ಲೇ ನರಳಾಡಿದ ಸೋಂಕಿತ ರೋಗಿಗಳು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ್: ರಾಜ್ಯದಲ್ಲಿ ಕೊವೀಡ್ ಸೋಂಕು ದಿನೇದಿನೇ ಉಲ್ಬಣಗೊಳ್ಳುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇನ್ನೂ ಗಡಿ ಜಿಲ್ಲೆ ಬೀದರ್ ಈಗ ಕೊರೋನಾ ವೈರಸ್ ಗೆ ತತ್ತರಿಸಿ ಹೋಗಿದ್ದು, ಸೋಂಕಿತರು ಚಿಕಿತ್ಸೆಗಾಗಿ ಬೆಡ್ ಗಳು ಸಿಗದ ಫುಟ್ ಪಾತ್ ಮೇಲೆ ನರಳಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗಡಿ ಜಿಲ್ಲೆ ಬೀದರ್ ನಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು, ಪ್ರತಿದಿನ 300 ದಿಂದ 400 ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಈಗಾಗಲೇ 14 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿದ್ದರೆ, ನಿನ್ನೆ ಒಂದೇ ದಿನ 7 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬ್ರಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳೆಲ್ಲವೂ ಭರ್ತಿ ಆಗಿದ್ದು, ರೋಗಿಗಳಿಗೆ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ.

ಬುಧವಾರ ಉಸಿರಾಟದ ತೋಂದರೆಯಿಂದ ಬಳಲುತ್ತಿದ್ದ ಮೂವರು ಸೋಂಕಿತರು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಆದರೆ ಅವರಿಗೆ ಬೆಡ್ ಸಿಗದೇ ಆಸ್ಪತ್ರೆಯ ಆವರಣದಲ್ಲಿ ನರಳಾಟ ನಡೆಸಿದ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ಆರೋಗ್ಯ ಸಿಬ್ಬಂದಿಗಳು ಬಾರದಿರುವುದು ರೋಗಿಗಳು ನರಕಯಾತನೆ ಅನುಭವಿಸುವಂತಾಗಿದೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ , ನೈಟ್ ಕರ್ಫ್ಯೂ, ಸೇರಿದಂತೆ ಹಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ ಕೊರೊನಾ ಸೋಂಕಿತರ ಜೀವ ಉಳಿಸಲು ಸರ್ಕಾರ ಏನು ವ್ಯವಸ್ಥೆ ಮಾಡಿದೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಆಸ್ಪತ್ರೆಗಳಲ್ಲಿ ಬೆಡ್, ಆಮ್ಲಜನಕ ಸೇರಿದಂತೆ ಸಿಬ್ಬಂದಿಗಳ ಕೊರತೆ ಇದೆ ಎನ್ನುವುದಕ್ಕೆ ಬೀದರಿನ ಈ ಘಟನೆ ತಾಜಾ ಉದಾಹರಣೆಯಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು