ಗುಜರಾತ್ ನಲ್ಲಿ ಪ್ರಬಲ ಸ್ಫೋಟ; 6 ಮಂದಿ ಸಾವು

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಅಹಮದಾಬಾದ್(04/11/2020): ಗುಜರಾತಿನ ಅಹ್ಮದಾಬಾದ್ ನಲ್ಲಿ ರಾಸಾಯನಿಕ ಗೋದಾಮಿನ ಸಮೀಪದಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ.

ಈ ವೇಳೆ ಗೋದಾಮಿನ ಭಾಗವೊಂದು ಕುಸಿದು 6 ಮಂದಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ.

ತುರ್ತು ಕಾರ್ಯಾಚರಣೆಯಲ್ಲಿ ಕಟ್ಟಡದ ಅವಶೇಷದಿಂದ ಕನಿಷ್ಠ 14 ಮಂದಿಯನ್ನು ಹೊರ ತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಎಲ್‌ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದ 14 ಜನರ ಪೈಕಿ ಆರು ಮಂದಿ ಸಾವನ್ನಪ್ಪಿದ್ದು, ಗಾಯಗೊಂಡಿದ್ದ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಹಮದಾಬಾದ್‌ನ ಕೈಗಾರಿಕಾ ಪ್ರದೇಶದ ಪಿರಾನಾ–ಪಿಪ್ಲಾಜ್ ರಸ್ತೆಯಲ್ಲಿರುವ ಗೋದಾಮಿನ ವಸತಿ ಕಟ್ಟಡದಲ್ಲಿ ಬೆಂಕಿಯಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ’ ಎಂದು ಡಿಸಿಪಿ ಅಶೋಕ್ ಮುನಿಯಾ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು