ಬಿಹಾರ(13-02-2021): ಕೋವಿಡ್ -19 ಗೆ ಸಂಬಂಧಿಸಿದ ನಕಲಿ ದತ್ತಾಂಶ ನಮೂದು ಬಿಹಾರದಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸ್ವತಃ ಸಿಎಂ ನಿತೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.
ರಾಜ್ಯದ 22 ಜಿಲ್ಲೆಗಳಲ್ಲಿ ಈ ಕುರಿತು ತನಿಖೆ ಪೂರ್ಣಗೊಂಡಿದೆ ಮತ್ತು ಅಧಿಕಾರಿಗಳ ಬೇಜವಾಬ್ದಾರಿಯುತ ವರ್ತನೆಯು ಕಂಡುಬಂದಿದೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಆಪಾದಿತ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ನಾವು ನಿರ್ದೇಶನ ನೀಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಆಘಾತಕಾರಿ ಎಂಬಂತೆ ಜಮುಯಿ, ಶೇಖ್ಪುರ, ಮತ್ತು ಪಾಟ್ನಾ ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳು ಕರೋನಾ ಪರೀಕ್ಷಾ ವರದಿಗಳಲ್ಲಿ ದೂರವಾಣಿ ಸಂಖ್ಯೆಯನ್ನು 0000000000 ಎಂದು ಉಲ್ಲೇಖಿಸಿವೆ. ನಕಲಿ ಕರೋನಾ ಪರೀಕ್ಷಾ ವರದಿಗಳನ್ನು ಸಿದ್ಧಪಡಿಸಿ ಲಂಚ ಪಡೆದ ಆರೋಪವನ್ನು ಅಧಿಕಾರಿಗಳು ಎದುರಿಸುತ್ತಿದ್ದಾರೆ.
ಆರ್ಜೆಡಿ ಸಂಸದ ಮನೋಜ್ ಅವರು ರಾಜ್ಯಸಭೆಯಲ್ಲಿ ಈ ವಿಷಯವನ್ನು ಎತ್ತಿದರು ಮತ್ತು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಏತನ್ಮಧ್ಯೆ, ಇದು ಗಂಭೀರ ವಿಷಯವಾಗಿದೆ ಎಂದು ರಾಜ್ಯಸಭೆಯ ಸ್ಪೀಕರ್ ಎಂ.ವೆಂಕಯ್ಯ ನಾಯ್ಡು ಹೇಳಿದ್ದರು. ಈ ವಿಷಯದಲ್ಲಿ ತನಿಖೆಯನ್ನು ಪ್ರಾರಂಭಿಸಲು ಅವರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರಿಗೆ ಶಿಫಾರಸ್ಸು ಮಾಡಿದ್ದರು.