ಬಿಜೆಪಿ ಸಚಿವೆಗೆ ಐಟಂ ಎಂದ ಮಾಜಿ ಸಿಎಂ

ex.cm
Share on facebook
Share on twitter
Share on linkedin
Share on whatsapp
Share on telegram
Share on email
Share on print

ಭೋಪಾಲ್(19-10-2020): ಮಧ್ಯಪ್ರದೇಶದ ಸಚಿವೆಯೋರ್ವರಿಗೆ ಮಾಜಿ ಸಿಎಂ ಕಮಲನಾಥ್ ಐಟಂ ಎಂದು ಕರೆದು ವಿವಾದಕ್ಕೆ ಈಡಾಗಿದ್ದಾರೆ.

 ಕಾಂಗ್ರೆಸ್​ನಿಂದ ಗ್ವಾಲಿಯರ್​ನ ಡಾಬ್ರಾ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ಇಮರ್ತಿ ದೇವಿ ಬಿಜೆಪಿ ಸೇರ್ಪಡೆ ಬಳಿಕ ಶಿವರಾಜ್‌ ಸಿಂಗ್‌ ಚೌಹಾಣ್‌ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿದ್ದಾರೆ.

ಉಪ ಚುನಾವಣೆಗೆ ಇಮರ್ತಿ ದೇವಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ ಕಮಲ್​ನಾಥ್​, ​ ಸುರೇಶ್​ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ ಹೆಸರು ಎಂದು ಪ್ರಶ್ನಿಸಿದರು.

ಅಲ್ಲಿ ನೆರೆದಿದ್ದ ಜನರು ಇಮರ್ತಿದೇವಿ ಎಂದರು. ಆಗ ಕಮಲ್​ನಾಥ್​, ನನಗಿಂತ ನಿಮಗೇ ಆಕೆಯ ಹೆಸರು ಚಿರಪರಿಚಿತ. ನೀವು ನನಗೆ ಮೊದಲೇ ಎಚ್ಚರಿಸಬೇಕಿತ್ತು. ಏನ್​ ಐಟಂ ಇವಳು ಎಂದು ಹೇಳಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು