ಬಿಜೆಪಿ ಆಡಳಿತವಿಲ್ಲದ ರಾಜ್ಯಗಳಿಗೆ ಸಿಬಿಐ ಭಯ!

uddav tackrey
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(22-10-2020): ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ರಾಜ್ಯ ಸರಕಾರದ ಒಪ್ಪಿಗೆಯಿಲ್ಲದೆ ಸಿಬಿಐ ಯಾವುದೇ ತನಿಖೆಯನ್ನು ರಾಜ್ಯದಲ್ಲಿ ಮಾಡುವಂತಿಲ್ಲ. ಈ ಕುರಿತು  ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಂಡು ಉದ್ಧವ್ ಠಾಕ್ರೆ ಸರ್ಕಾರ ಆದೇಶವನ್ನು ಹೊರಡಿಸಿದೆ.

 ರಾಜಸ್ಥಾನ, ಛತ್ತಿಸ್ ಗಡ ಮತ್ತು ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಈ ಕುರಿತು ನಿರ್ಧಾರವನ್ನು ರಾಜ್ಯ ಸರಕಾರಗಳು ತೆಗೆದುಕೊಂಡಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿಲ್ಲ. ಈ ನಿರ್ಧಾರಗಳು ಬಿಜೆಪಿ ನೇತೃತ್ವದ ಕೇಂದ್ರಸರ್ಕಾರ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆತಂಕದಿಂದ ನಡೆದಿದೆಯಾ ಎಂಬ ಪ್ರಶ್ನೆ ಮೂಡಿದೆ.

ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಜಾಹೀರಾತು ಏಜೆನ್ಸಿಯೊಂದು ಟಿಆರ್‌ಪಿ ಹಗರಣದ ಕುರಿತು ದೂರು ದಾಖಲಿಸಿದ ನಂತರ ಉತ್ತರ ಪ್ರದೇಶ ಪೊಲೀಸರು ಶಿಫಾರಸ್ಸಿನ ಹಿನ್ನಲೆಯಲ್ಲಿ ಸಿಬಿಐ ತಂಡ ಪ್ರಕರಣದ ತನಿಖೆಗಿಳಿದಿತ್ತು. ಇದರ ಬೆನ್ನಲ್ಲೇ ಸರ್ಕಾರದ ಈ ನಿರ್ಧಾರ ಹೊರಬಿದ್ದಿದೆ.

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಸಲ್ಲಿಸಿದ ದೂರಿನ ಆಧಾರದ ಮೇಲೆ ರೇಟಿಂಗ್ ಹಗರಣದ ತನಿಖೆಗಾಗಿ ಸಿಬಿಐ ಪ್ರಕರಣ ದಾಖಲಿಸಿದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಸರ್ಕಾರದ ಈ ಆದೇಶ ಬಂದಿದೆ.

ಆದರೇ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಸಿಬಿಐ ತನಿಖೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿದು ಬಂದಿದೆ. ಈ ತನಿಖೆ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ನಡೆಯುತ್ತಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು