ಬಿಜೆಪಿ ಸೇರಿದ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಭೋಪಾಲ್(25/10/2020): ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸರಣಿ ಮುಂದುವರಿದಿದೆ. ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ರಾಹುಲ್ ಲೋಧಿ ಅವರು ಪಕ್ಷ ಮತ್ತು ಅವರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನವೆಂಬರ್ 3 ರ ರಾಜ್ಯ ಉಪಚುನಾವಣೆಗೆ ಮುನ್ನವೇ ಭಾನುವಾರ ಆಡಳಿತಾರೂಢ ಬಿಜೆಪಿ ಸೇರಿದರು. ಇದರೊಂದಿಗೆ ಕಳೆದ ಮಾರ್ಚ್ ನಿಂದ ಇದುವರೆಗೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

“ಲೋಧಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ರಾಜೀನಾಮೆಯನ್ನು ಇಂದು ಅಂಗೀಕರಿಸಲಾಗಿದೆ” ಎಂದು ವಿಧಾನಸಭೆ ಹಂಗಾಮಿ ಸ್ಪೀಕರ್ ರಾಮೇಶ್ವರ್ ಶರ್ಮಾ ಅವರು ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು