ಭೋಪಾಲ್(22-02-2020): ಬಿಜೆಪಿ ನಾಯಕನೋರ್ವ ಶಾಲಾ ಶಿಕ್ಷಕ ಮತ್ತು ಇನ್ನೋರ್ವನ ಜೊತೆ ಸೇರಿ 20ವರ್ಷದ ಯುವತಿಗೆ ಗ್ಯಾಂಗ್ ರೇಪ್ ಮಾಡಿರುವ ಘಟನೆ ಮಧ್ಯ ಪ್ರದೇಶದ ವಿಂಧ್ಯಾ ಪ್ರದೇಶದ ಶಹ್ದೋಲ್ ಜಿಲ್ಲೆಯಲ್ಲಿ ನಡೆದಿದೆ.
ಬಿಜೆಪಿ ಮುಖಂಡ ವಿಜಯ್ ತ್ರಿಪಾಠಿ, ಪ್ರಾಥಮಿಕ ಶಾಲಾ ಶಿಕ್ಷಕ ರಾಜೇಶ್ ಶುಕ್ಲಾ ಮತ್ತು ಅವರ ಇಬ್ಬರು ಸಹಾಯಕರು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಫಾರ್ಮ್ ಹೌಸ್ ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ.
ಅತ್ಯಾಚಾರಕ್ಕೂ ಮುನ್ನ ಯುವತಿಗೆ ಬಲವಂತವಾಗಿ ಮದ್ಯ ಕುಡಿಸಲಾಗಿದೆ. ಯುವತಿ ಮೇಲೆ ನಿರಂತರ 2 ದಿನಗಳ ಕಾಲ ಅತ್ಯಾಚಾರ ಎಸಗಲಾಗಿದೆ. ಕೃತ್ಯದ ಬಳಿಕ ಪೋಷಕರಿಗೆ ಯುವತಿ ಮಾಹಿತಿ ನೀಡಿದ್ದಾಳೆ. ತಕ್ಷಣ ಎಚ್ಚೆತ್ತ ಪೋಷಕರು ಕೇಸ್ ದಾಖಲಿಸಿದ್ದಾರೆ.
ಶಿಕ್ಷಕ ರಾಜೇಶ್ ಶುಕ್ಲಾ, ಬಿಜೆಪಿ ಮುಖಂಡ ವಿಜಯ್ ತ್ರಿಪಾಠಿ ಸೇರಿದಂತೆ ಮೂವರ ವಿರುದ್ಧ ಐಪಿಸಿ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ), 342 ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.