ಬುಲಂದ್ಶಹರ್ (15-11-2020): ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಕೈಲಾಶ್ ಸಾರಂಗ್ ನಿಧನರಾಗಿದ್ದಾರೆ.
85 ವರ್ಷದ ಕೈಲಾಶ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಮುಂಬೈ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕೈಲಾಶ್ ಅವರ ಮಗ ವಿಶ್ವಾಸ್ ಸಾರಂಗ್ ಮಧ್ಯಪ್ರದೇಶ ಸರ್ಕಾರದ ಸಚಿವರಾಗಿದ್ದಾರೆ.
ಕೈಲಾಶ್ ಅವರ ಸಾವಿಗೆ ಪ್ರಧಾನಿ ಮೋದಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.