ಬೆಂಗಳೂರು(24-11-2020): ಮಸ್ಕಿ ಕ್ಷೇತ್ರದ ಬಿಜೆಪಿಯ ಸಾಂಭವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಪ್ರತಾಪ್ ಗೌಡ ಪಾಟೀಲ್, ಸರ್ಕಾರ ರಚನೆಯಾಗುವಾಗ 17 ಜನರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಆ ಭರವಸೆ ಈಡೇರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ನಾನು ಬಿಜೆಪಿಗೆ ಬಂದಿದ್ದೇನೆ. ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸುವ ವಿಶ್ವಾಸ ಇದೆ. ನಾವೆಲ್ಲಾ ಒಂದಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ವಿಶೇಷ ಎಂದರೆ ಮಸ್ಕಿ ಕ್ಷೇತ್ರಕ್ಕೆ ಚುನಾವಣೆಯೇ ಘೋಷಣೆಯಾಗಿಲ್ಲ, ಅಭ್ಯರ್ಥಿಯನ್ನು ಬಿಜೆಪಿ ಅಂತಿಮ ಮಾಡಿಲ್ಲ, ಈ ಮೊದಲೇ ಪ್ರತಾಪ್ ಗೌಡ ಹೇಳಿಕೆ ಹೊರಬಿದ್ದಿದೆ.