ನವದೆಹಲಿ(04-10-2020): ಹತ್ರಾಸ್ ಮತ್ತು ಬಲರಾಂಪುರ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ, ಉತ್ತರಪ್ರದೇಶದಿಂದ ಇಂತಹ ಮತ್ತೊಂದು ಪ್ರಕರಣ ವರದಿಯಾಗಿದೆ.
ಪ್ರಯಾಗರಾಜ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ ಮುಖಂಡನನ್ನು ಬಂಧಿಸಲಾಗಿದೆ.
ಬಿಎ ವಿದ್ಯಾರ್ಥಿನಿ ಸಂತ್ರಸ್ತೆ ಜಿಲ್ಲೆಯ ಕರ್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು. ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಮುಖಂಡ ಡಾ.ಶ್ಯಾಮ್ ಪ್ರಕಾಶ್ ದ್ವಿವೇದಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಹತ್ರಾಸ್ನಲ್ಲಿ ಉತ್ತರ ಪ್ರದೇಶ ಸರ್ಕಾರ ನಡೆದುಕೊಂಡ ರೀತಿಯ ಬೆನ್ನಲ್ಲೇ ಬಿಜೆಪಿ ಮುಖಂಡನ ಬಂಧನ ಯೋಗಿ ಸರಕಾರಕ್ಕೆ ಮತ್ತು ಬಿಜೆಪಿಗೆ ಮುಖಭಂಗವಾಗಿದೆ.