‘ನಬಣ್ಣ ಚಲೋ’: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್, ಬಿಗುವಿನ ವಾತಾವರಣ

bjp
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲ್ಕತ್ತಾ(08-10-2020): ಮಮತಾ ಬ್ಯಾನರ್ಜಿ ಕಚೇರಿಗೆ ‘ನಬಣ್ಣ ಚಲೋ’ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು  ತಡೆದಿದ್ದು, ಟಿಯರ್ ಗ್ಯಾಸ್ ಬಳಸಿ ಚದುರಿಸಿದ್ದಾರೆ.

‘ನಬಣ್ಣ ಚಲೋ’ ಪ್ರತಿಭಟನೆ  ವೇಳೆ ಬ್ಯಾರಿಕೇಡ್ ಮುರಿಯಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಬಿಜೆಪಿ ಪಕ್ಷದ ಭಾವುಟದೊಂದಿಗೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಬ್ಯಾರಿಕೇಡ್ ಗಳನ್ನು ಮುರಿಯಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯುವನ್ನು ಸಿಡಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಖೈದಿರ್ ಪುರದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.ಪೊಲೀಸರಿಗೆ ಇದು ಕಾಣಿಸಲಿಲ್ಲವೇ ಎಂದು ಬಿಜೆಪಿ ಮುಖಂಡೆ ಲಾಕೆಟ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊಸದಾಗಿ ಆಯ್ಕೆಯಾದ ಬಿಜೆಪಿ ಯುವ ವಿಭಾಗದ ಮುಖ್ಯಸ್ಥ ತೇಜಸ್ವಿ ಸೂರ್ಯ ಕಲ್ಕತ್ತಾಗೆ ತೆರಳಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯು ನೈರ್ಮಲ್ಯೀಕರಣಕ್ಕಾಗಿ ಇಂದಿನಿಂದ ಎರಡು ದಿನ ಮುಚ್ಚಲ್ಪಟ್ಟಿದೆ. ಆದರೆ ಬಿಜೆಪಿ ಇದು ಭಯದಿಂದ ಮುಚ್ಚಿರುವುದು ಎಂದು ಹೇಳಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು