ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಯೆಂಬ ಶಂಕೆ ವ್ಯಕ್ತವಾಗಿದೆ.
ಮನೆಗೆ ಚಿಲಕ ಹಾಕಲಾಗಿ, ಒಳಗೆ ನೇಣು ಹಾಕಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರಿಗೆ ಅರುವತ್ತೆರಡು ವರ್ಷ ವಯಸ್ಸಾಗಿತ್ತು. 2014ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ವಿದೇಶಾಂಗ ವ್ಯವಹಾರಗಳ ಸಂಸದೀಯಸ್ಥಾಯಿ ಸಮಿತಿಯಲ್ಲಿಯೂ ಸ್ಥಾನ ಪಡೆದಿದ್ದರು.
ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.