ತುಮಕೂರು; ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು; ಡಿಕೆಶಿ, ಕುಮಾರ್ ಸ್ವಾಮಿ ಪ್ರತಿಕ್ರಿಯೆ ಏನು ಗೊತ್ತಾ?

bjp
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(10/11/2020): ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಇದೇ ಮೊದಲ ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ ಅವರು 72,739 ಮತಗಳನ್ನ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ವಿಜಯದ ನಗೆ ಬೀರಿದ್ದಾರೆ.

ಎರಡು ವಿಧಾನ  ಸಭಾ ಕ್ಷೇತ್ರದಲ್ಲಿ ಆದ ಸೋಲನ್ನು ಒಪ್ಪಿಕೊಳ್ಳುತ್ತೇನೆ. ಪಕ್ಷದ ಅಧ್ಯಕ್ಷನಾಗಿ ನಾನೇ ಈ ಸೋಲಿನ ಹೊಣೆ ಹೊರುತ್ತೇನೆ ಎಂದು ಡಿ,ಕೆ,ಶಿವಕುಮಾರ್ ಹೇಳಿದ್ದಾರೆ.

ಉಪಚುನಾವಣೆ ಅಷ್ಟೇನೂ ಮಹತ್ವದ್ದಲ್ಲ. ಆದರೂ, ಜನರ ತೀರ್ಪಿಗೆ ಶರಣಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ್ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು