ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಆರೋಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ‌.

ಈ ಕುರಿತು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್ ಘಟಕ ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರದ ಸಭೆಗೆ ಆಗಮಿಸುವಂತೆ ಮತದಾರರಿಗೆ ಹಣ ಹಂಚುತ್ತಿರುವ ನಂದೀಶ್ ರೆಡ್ಡಿ ಅವರ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ಟೀಕಿಸಿದೆ.

ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? ಎಂದು ಪ್ರಶ್ನಿಸಿದೆ.

ಬೇಕಾಬಿಟ್ಟಿಯಾಗಿ ಬಿಜೆಪಿಯವರು ಹೀಗೆ ಹಣದ ಹೊಳೆ ಹರಿಸುತ್ತಿದ್ದರೂ IT, ED, ಸಂಸ್ಥೆಗಳು ಏನು ಮಾಡುತ್ತಿವೆ? ಈ ಹಣ ಎಲ್ಲಿಂದ ಬಂತು ?
ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿರುವುದೇಕೆ?
ಆಡಳಿತ ಪಕ್ಷದ ಶಾಸಕರ ಈ ಆರೋಪ ಗಂಭೀರ ಎನಿಸಲಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಘಟಕ ಗಂಭೀರ ಆರೋಪ ಮಾಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು