ಬ್ಲಾಕ್ ಫಂಗಸ್: ಮತ್ತೊಂದು ಭೀಕರ ಅಪಾಯ ಎದುರಿಸುವ ಮುನ್ನ ಸರ್ಕಾರ ಕೂಡಲೇ ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳಲಿ: ಎಚ್.ಡಿ.ಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ.

Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು ‘ರಾಜಕೀಯ’ವೆಂದು ಭಾವಿಸಿದ್ದಾರೆ. ಪಿಡುಗೊಂದು ಕಾಡುವಾಗ ‘ಹಿಂದೆಂದೂ ನೋಡಿರದಷ್ಟು ಜನಸ್ತೋಮ’ ಸೇರಿಸಿ ರ‍್ಯಾಲಿ ಮಾಡಿದ್ದು, ಜನರನ್ನು ಕಂಡು ಉದ್ಘಾರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು