ಬ್ಲಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು: ಸಿಎಂ ಬಿ.ಎಸ್. ಯಡಿಯೂರಪ್ಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ವೈರಸ್ ಅಟ್ಟಹಾಸದ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ಸೋಂಕು ಹರಡುತ್ತಿದೆ, ಬ್ಲಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು ಇದಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿದ್ದು ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಅವರು ಹೇಳಿದ್ದಾರೆ.

‘ಬ್ಲ್ಯಾಕ್ ಫಂಗಸ್ ಸೋಂಕಿಗೆ ಜಿಲ್ಲಾಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆೆ ಕಡೆಗೆ ಹೆಚ್ಚಿನ ಗಮನಹರಿಸಿ, ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ’ ಎಂದು ಸಿಎಂ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು