ಜಿದ್ದಾ(11/11/2020): ಸೌದಿ ಅರೇಬಿಯಾದ ಜಿದ್ದಾ ನಗರದಲ್ಲಿ ಸ್ಫೋಟಕವೊಂದು ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಮೊದಲನೇ ಮಹಾ ಯುದ್ಧದ ಸ್ಮರಣಾರ್ಥ ಕಾರ್ಯಕ್ರಮವೊಂದು ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.
ಫ್ರಾನ್ಸ್ ನ ವಿದೇಶಾಂಗ ಸಚಿವರು ಸೇರಿದಂತೆ ಯುರೋಪಿನ ಹಲವು ಪ್ರಮುಖ ರಾಜತಾಂತ್ರಿಕ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.