ಶಾಕಿಂಗ್: ಶೀಘ್ರ ಸರಕಾರಿ ಬಸ್ ಪ್ರಯಾಣ ದರ ದುಬಾರಿ ಸಾಧ್ಯತೆ!

bmtc
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(26-02-2021): ಸಾರಿಗೆ ಖಾತೆಯನ್ನು ಹೊಂದಿರುವ ಕರ್ನಾಟಕದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ಗಳ ದರವನ್ನು ಹೆಚ್ಚಿಸುವ ಬಗ್ಗೆ ಮಾಹಿತಿಯನ್ನು ನೀಡಿದ್ದು, ಈ ಬಗ್ಗೆ  ಮುಖ್ಯಮಂತ್ರಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಇಂಧನದ ಬೆಲೆಗಳು ಮತ್ತು ಸಾಂಕ್ರಾಮಿಕದ ಸಮಯದಲ್ಲಿ ಉಂಟಾದ ನಷ್ಟದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸರ್ಕಾರಿ ನಿಗಮವನ್ನು ಉಳಿಸಲು ಶುಲ್ಕ ಹೆಚ್ಚಳ ಅಗತ್ಯವಿದೆ ಎಂದು ಸಾರಿಗೆ ಇಲಾಖೆ ಸುಳಿವು ನೀಡಿದೆ.

2014-15ರ ನಂತರ ಹೆಚ್ಚಳ ಸಾರಿಗೆ ದರದಲ್ಲಿ ಕಂಡಿಲ್ಲವಾದ್ದರಿಂದ ದರ ಹೆಚ್ಚಳ ಮಾಡಲಾಗುವುದು ಎಂದು ಸವದಿ ಹೇಳಿದ್ದಾರೆ.

ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕಿ ಸಿ ಸಿಖಾ ಮಾತನಾಡುತ್ತಾ, ಪ್ರಸಕ್ತ ಹಣಕಾಸು ವರ್ಷದಲ್ಲಿ ನಿಗಮವು 700 ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು