ಸರಕಾರಿ ಮುದ್ರೆ / ಲಾಂಛನ ದುರುಪಯೋಗ ಆರೋಪ | ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್ ಎಸ್ ಸಚ್ಚಿದಾನಂದ ಮೂರ್ತಿ ವಿರುದ್ಧ ದೂರು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಸರಕಾರಿ ಮುದ್ರೆ /ಲಾಂಭನ ದುರುಪಯೋಗಗೊಳಿಸಿದ್ದಾರೆಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್. ಎಸ್. ಸಚ್ಚಿದಾನಂದ ಮೂರ್ತಿ ವಿರುದ್ಧ ದೂರು ನೀಡಲಾಗಿದೆ.

ಕಾವ್ಯ ಅಚ್ಯುತ್ ಎಂಬವರು ದೂರು ನೀಡಿದ್ದು, ನಟ ಚೇತನ್ ಅವರ ವಿರುದ್ದ ಬ್ರಾಹ್ಮಣರನ್ನು ಎತ್ತಿ ಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ಎಂಬವರು ಯತ್ನ ನಡೆಸುತ್ತಿದ್ದಾರೆಂದು ಆರೋಪಿಸಲಾಗಿದೆ.

ಬ್ರಾಹ್ಮಣ ಅಭಿವೃದ್ದಿ ಮಂಡಳಿಯು ಬ್ರಾಹ್ಮಣರ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಮೀಸಲಾಗಿರುವ ಸರ್ಕಾರಿ ಸಂಸ್ಥೆಯಾಗಿದೆ. ಬಡ, ಹಿಂದುಳಿದ ಬ್ರಾಹ್ಮಣರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸುವುದು ಮತ್ತು ಜಾರಿ ಮಾಡುವುದಷ್ಟೇ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಕೆಲಸವಾಗಿರುತ್ತದೆ. ಬಡ, ಹಿಂದುಳಿದ ಬ್ರಾಹ್ಮಣರ ಅಭಿವೃದ್ದಿಯ ನಿಟ್ಟಿನಲ್ಲಿ ಕೆಲಸ ಮಾಡದ ಮಂಡಳಿ ಅಧ್ಯಕ್ಷರು, ಸರ್ಕಾರಿ ದಾಖಲೆ/ಮುದ್ರೆ/ ಲಾಂಛನ ಮತ್ತು ಕರ್ನಾಟಕ ಸರ್ಕಾರ ಎಂಬ ಹೆಸರನ್ನು ದುರುಪಯೋಗಪಡಿಸಿಕೊಂಡು ನಟ ಚೇತನ್ ವಿರುದ್ದ ದೂರು ನೀಡುವ ಮೂಲಕ ಕ್ರಿಮಿನಲ್ ಅಪರಾಧ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಸವ ಅನುಯಾಯಿ ಆಗಿರುವ ಶರಣ ಚೇತನ್ ಅಹಿಂಸಾ ವಿರುದ್ದ ಸರ್ಕಾರಿ ದಾಖಲೆಯನ್ನು ದುರುಪಯೋಗ ಪಡಿಸಿಕೊಂಡು ಬ್ರಾಹ್ಮಣರನ್ನು ಎತ್ತಿಕಟ್ಟುವ, ಸಮುದಾಯಗಳ ಮಧ್ಯೆ ಅಶಾಂತಿ‌ ಸೃಷ್ಟಿಸುವ ಮತ್ತು ಸರ್ಕಾರಿ ಲಾಂಛನ ದುರುಪಯೋಗ ಪಡಿಸಿಕೊಂಡಿರುವ ಹೆಚ್ ಎಸ್ ಸಚ್ಚಿದಾನಂದ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕಾವ್ಯ ಅಚ್ಯುತ್ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು