ಚಿಕ್ಕಮಗಳೂರು: 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ 27 ಪೊಲೀಸರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.
ಮೂವರು ಪೊಲೀಸ್ ಅಧಿಕಾರಿಗಳು ಹಾಗೂ 24 ಸಿಬ್ಬಂದಿ ಸೋಂಕಿಗೆ ಪಾಸಿಟಿವ್ ಆಗಿರುವುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ದೃಢಪಡಿಸಿದ್ದಾರೆ.
ಕೋವಿಡ್ ಸೋಂಕಿತ ಪೊಲೀಸರ ಪೈಕಿ ಯಾರಲ್ಲೂ ರೋಗದ ಲಕ್ಷಣಗಳಿಲ್ಲ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ
ಸೋಂಕು ದೃಢಪಟ್ಟವರಿಗೆ ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದವರ ತಪಾಸಣೆಯನ್ನೂ ಮಾಡಲಾಗುತ್ತಿದೆ.
ಕರ್ತವ್ಯದ ನಡುವೆ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಸಿಬ್ಬಂದಿಗೆ ಎಸ್ಪಿ ಸೂಚನೆ ನೀಡಿದ್ದಾರೆ.
ಕಾಫಿನಾಡಲ್ಲೂ ಕೊರೋನ ಸೋಂಕು ದಿನೇ-ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು