ಬಿ.ಎಸ್.ವೈ ‘ಅಪರೇಷನ್ ಕಮಲ’ ಆಡಿಯೋ ಪ್ರಕರಣ: ತನಿಖೆಗೆ ಆದೇಶಿಸಿದ ಹೈಕೋರ್ಟ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲಬುರ್ಗಿ: 2019ರಲ್ಲಿ ಬಿ.ಎಸ್.ಯಡಿಯೂರಪ್ಪ ನಡೆಸಿದ ಆಪರೇಷನ್ ಕಮಲ ಪ್ರಕರಣ ಇಂದು ಬಿ.ಎಸ್.ವೈಗೆ ಕಂಟಕವಾಗಿದೆ. ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹಲವು ತಂತ್ರಗಳನ್ನು ಹೂಡಿದರು.

ಕಾಂಗ್ರೆಸ್​- ಜೆಡಿಎಸ್​ ಶಾಸಕರನ್ನು ಸೆಳೆಯುವ ನಿಟ್ಟಿನಲ್ಲಿ ಶಾಸಕರನ್ನು ಸಂಪರ್ಕಿಸಿದರು. ಶಾಸಕರನ್ನು ಖರೀದಿಸಿ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸಲು ಹರಸಾಹಸ ಪಟ್ಟಿದರು. ಆಪರೇಷನ್ ಕಮಲ ಸಂಬಂಧವಾಗಿ ಶಾಸಕರೊಂದಿಗೆ ಬಿ.ಎಸ್.ಯಡಿಯೂರಪ್ಪ ನಡೆಸಿದ ಸಂಭಾಷಣೆಯ ಆಡಿಯೋ ರೆಕಾರ್ಡ್ ಅಂದು ಎಲ್ಲೆಡೆ ವೈರಲ್ ಆಗಿ ಹೊಸ ಸಂಚಲನ ಸೃಷ್ಟಿಸಿತ್ತು.

ತಮ್ಮ ತಂದೆಯವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ಪಾಟೀಲ ಕಂದಕೂರ ರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕೇಸ್ ಸಂಬಂಧವಾಗಿ ಆಡಿಯೋ ಸಹ ಸಾಕ್ಷಿಯಾಗಿ ಬಿಡುಗಡೆಯಾಗಿತ್ತು. ತದನಂತರ ಈ ಕುರಿತ ತನಿಖೆಗೆ ತಡೆಯಾಜ್ಞೆ ತರಲಾಗಿತ್ತು. ಆದರೆ, ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಆದೇಶ ನೀಡಿದೆ.

ಯಡಿಯೂರಪ್ಪ ಪರ ಹಾರನಳ್ಳಿ, ಪಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ನಂತರ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಈಗಾಗಲೇ ಡಿನೋಟಿಫಿಕೇಷನ್ ಪ್ರಕರಣ ಎದುರಿಸುತ್ತಿರುವ ಯಡಿಯೂರಪ್ಪನವರಿಗೆ ಇದೊಂದು ಕಂಟಕವಾಗುವ ಸಾಧ್ಯತೆ ಇದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು