ಬಿ.ಎಸ್.ವೈ.ಅವರಿಗೆ ವಯಸ್ಸಾಗಿದೆ, ಮುಂದಿನ ಸಿಎಂ ಪಂಚಮಸಾಲಿ ಲಿಂಗಾಯತರೇ ಆಗಲಿ: ಎಚ್.ವಿಶ್ವನಾಥ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಬೇರೆ ನಾಯಕರಿದ್ದಾರೆ, ಬೇರೆಯವರಿಗೆ ಬೆಳೆಯಲು ಯಡಿಯೂರಪ್ಪನವರು ಅವಕಾಶ ನೀಡಲಿ. ಮತ್ತೊಬ್ಬರು ಲಿಂಗಾಯತ ಸಮುದಾಯದವರೇ ಮುಖ್ಯಮಂತ್ರಿ ಆಗಲಿ, ಅದರಲ್ಲೂ ಪಂಚಮಸಾಲಿ ಲಿಂಗಾಯತ ಸಮುದಾಯದವರೇ ಮುಖ್ಯಮಂತ್ರಿ ಆಗಲಿ, ಮುರುಗೇಶ್ ನಿರಾಣಿ, ಬಸನ ಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ಅವರು ಮೂವರಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಗಳಾಗಲಿ ಎಂದು ಎಚ್.ವಿಶ್ವನಾಥ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಇಂದು ಅರುಣ್ ಸಿಂಗ್ ಅವರ ಜೊತೆ ಒನ್ ಟು ಒನ್ ಮೀಟಿಂಗ್ ನಡೆಸಿದ ನಂತರ ಹೊರಗೆ ಬಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವನಾಥ್ ನಾಯಕತ್ವ ಬದಲಾವಣೆಗೆ ಮತ್ತೊಂದು ಟ್ವಿಸ್ಟ್ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಈಗ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ಪರಿಸ್ಥಿತಿ, ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮತ್ತೊಮ್ಮೆ ಯಡಿಯೂರಪ್ಪ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ಮುಖ್ಯಮಂತ್ರಿ ಅದಲು – ಬದಲು ಮಾಡುವ ಪ್ರಶ್ನೆಯೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೂ ಶಮನವಾಗದ ಸಿಎಂ ಬದಲಾವಣೆ ಬಿರುಗಾಳಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಕುತೂಹಲ ಮೂಡಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು