ಮಂಗಳೂರು; ಎರಡು ತಂಡಗಳ ನಡುವೆ ಗುಂಡಿನ ಚಕಮಕಿ; ನಾಲ್ವರು ಗಂಭೀರ

pistol
Share on facebook
Share on twitter
Share on linkedin
Share on whatsapp
Share on telegram
Share on email
Share on print
ಮಂಗಳೂರು(30/10/2020): ಇಂದು ಸಂಜೆಯ ಸುಮಾರಿಗೆ ನಗರದ ಫಳ್ನೀರ್ ನಲ್ಲಿ ಎರಡು ತಂಡಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ನಾಲ್ವರ ಪೈಕಿ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡೂ ಕಡೆಯಿಂದಲೂ ಗುಂಡು ಹಾರಿಸಲಾಗಿದೆ. ಏರ್ ಪಿಸ್ತೂಲ್‌ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದಾಳಿಯ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು