ಬೆಂಗಳೂರು(4-11-2020): ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಾಳೆ ಮುಷ್ಕರ ನಡೆಸಲು (ನವೆಂಬರ್ 5ರಂದು) ಸಾರಿಗೆ ನಿಗಮಗಳ ನೌಕರರ ಫೆಡರೇಶನ್ ಕರೆ ನೀಡಿದೆ.
ಸಾರಿಗೆ ನಿಗಮಗಳಲ್ಲಿ ಬಸ್ ಗಳ ಕಾರ್ಯಾಚರಣೆ ಯಥಾಸ್ಥಿತಿಗೆ ಬರುವವರೆಗೆ ಪೂರ್ಣ ವೇತನ ನೀಡಬೇಕು. ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ಕಿರುಕುಳ, ದಾಳಿ ನಿಲ್ಲಿಸಬೇಕು. ಕೋವಿಡ್ ಪಾಸಿಟಿವ್ ಬಂದವರಿಗೆ ಕ್ವಾರಂಟೈನ್ ಮತ್ತು ಚಿಕಿತ್ಸೆ ಪಡೆದ ಅವಧಿಯಲ್ಲಿ ವೇತನ ಸಹಿತ ರಜೆ ನೀಡಬೇಕು. ಕಾರ್ಮಿಕರ ಗಳಿಕೆ ರಜೆಗಳನ್ನು ಅವರ ಖಾತೆಗೆ ವಾಪಸ್ ನೀಡಬೇಕು. ಕೊರೋನಾನಾದಿಂದ ಮೃತಪಟ್ಟವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಂಘಗಳು ಸರಕಾರದ ಮುಂದಿಟ್ಟಿವೆ.
ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಫ್ರೀಡಂ ಪಾರ್ಕಿನಲ್ಲಿ ಮುಷ್ಕರ ಕೈಗೊಂಡಿದ್ದಾರೆ. ಬಸ್ ಸಂಚಾರವು ವ್ಯತ್ಯಯವಾಗುವ ಸಾಧ್ಯತೆಯಿದೆಯೆನ್ನಲಾಗಿದೆ.