ನವದೆಹಲಿ(21-12-2020): ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಸುಧಾರಿಸಿದ ಕೂಡಲೇ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಕೈಗೆತ್ತಿಕೊಳ್ಳಲಾಗುವುದು, ಸಿಎಎ ಜಾರಿ ಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕೋವಿಡ್-19ನಿಂದಾಗಿ ಇಷ್ಟು ದೊಡ್ಡ ಪ್ರಕ್ರಿಯೆಯನ್ನು ಕೈಗೊಳ್ಳಲು ಸಾಧ್ಯವಾಗದ ಕಾರಣ ಸಿಎಎ ನಿಯಮಗಳನ್ನು ಇನ್ನೂ ರೂಪಿಸಲಾಗಿಲ್ಲ ಎಂದು ಶಾ ಹೇಳಿದರು. ವ್ಯಾಕ್ಸಿನೇಷನ್ ಪ್ರಾರಂಭವಾದ ತಕ್ಷಣ, ಮತ್ತು ವೈರಸ್ ಸರ್ಕಲ್ ಮುರಿದುಹೋದಾಗ, ನಾವು ಅದನ್ನು ಪರಿಗಣಿಸುತ್ತೇವೆ ಎಂದು ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಷಾ, ಬಂಗಾಳ ಪ್ರವಾಸದ ಸಮಯದಲ್ಲಿ ಟಿಎಂಸಿ ಕಾರ್ಯಕರ್ತರು ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದ ರೀತಿ ಖಂಡನಾರ್ಹ. ನಾನು ಅದನ್ನು ವೈಯಕ್ತಿಕವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕನ್ನು ಹೊಂದಿರಬೇಕು ಎಂದು ಬಿಜೆಪಿ ನಂಬುತ್ತದೆ ಶೀಘ್ರದಲ್ಲೇ ಬಂಗಾಳದಲ್ಲಿ ಸಿಎಎ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ.