ನವದೆಹಲಿ(06-12-2020): ಸಿಎಎ ಕಾಯ್ದೆ ಜನವರಿಯಿಂದಲೇ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಿಳಿಸಿದ್ದಾರೆ.
ಸಿಎಎ ಜಾರಿಗೆ ಬಂದರೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತಕ್ಕೆ ಆಗಮಿಸಿರುವ ಸಿಖ್, ಬೌದ್ಧರು, ಕ್ರಿಶ್ಚಿಯನ್, ಜೈನರು ಮತ್ತು ಪಾರ್ಸಿಗಳಿಗೆ ಭಾರತ ಪೌರತ್ವ ನೀಡಲಿದೆ.
ನೆರೆಯ ದೇಶಗಳಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಆಗಮಿಸಿರುವ ನಿರಾಶ್ರಿತರಿಗೆ ಪೌರತ್ವ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಿಎಎ ಜಾರಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ನಿರಾಶ್ರಿತರಿಗೆ ಪೌರತ್ವ ದೊರೆಯಲಿದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿಜಯವರ್ಗಿಯ ಹೇಳಿದ್ದಾರೆ.