ಉತ್ತರಪ್ರದೇಶ (20-11-2020): ದುರಂತ ಘಟನೆಯಲ್ಲಿ ಉತ್ತರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.
ವಿವರಗಳ ಪ್ರಕಾರ, ಮಣಿಕಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಯಾಗರಾಜ್-ಲಕ್ನೋ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರಲ್ಲಿ ಆರು ಮಕ್ಕಳೂ ಸೇರಿದ್ದಾರೆ.
ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಬೊಲೆರೊದಲ್ಲಿದ್ದವರು ನಬಬ್ಗಂಜ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಹಿರಿಯ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳಲು ಸೂಚಿಸಿದ್ದಾರೆ.