ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಬಿಜೆಪಿ ಶಾಸಕ| ಕೇಸ್ ದಾಖಲು

bjp mla
Share on facebook
Share on twitter
Share on linkedin
Share on whatsapp
Share on telegram
Share on email
Share on print

ರಾಜಸ್ಥಾನ(05-02-2021): ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್‌ ಲಾಲ್‌ ಭೀಲ್ ಮೇಲೆ ಯುವತಿ ಯೋರ್ವಳು ರೇಪ್ ಕೇಸ್ ನ್ನು ದಾಖಲಿಸಿದ್ದಾಳೆ.

ಸುಖರ್​ ಪೊಲೀಸ್​ ಠಾಣೆಯಲ್ಲಿ 35 ವರ್ಷದ ಮಧ್ಯಪ್ರದೇಶ ಮೂಲದ ಯುವತಿ ಶಾಸಕನ ವಿರುದ್ಧ ದೂರು ದಾಖಲಿಸಿದ್ದು, ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್, ಈಗಾಗಲೇ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು