HTFC ವಾರ್ಷಿಕೋತ್ಸವ,* *3ನೇ‌ಬಾರಿ ಅಧ್ಯಕ್ಷರಾಗಿ ಸಮೀರ್ K S , ಕಾರ್ಯದರ್ಶಿಯಾಗಿ ಸಮೀರ್ M G ಆಯ್ಕೆ*

ವಿಟ್ಲ : ಇಲ್ಲಿಗೆ ಸಮೀಪದ ಟಿಪ್ಪು ನಗರದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ಮಿಂಚಿನ ಜನಸೇವೆಯ ಮೂಲಕ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿ ಊರಪರವೂರ ಪ್ರಶಂಸೆಗೆ ಪಾತ್ರವಾಗಿರುವ ಹೆಮ್ಮೆಯ ಸಂಘಟನೆಯಾಗಿದೆ. *ಹಝ್ರತ್ ಟಿಪ್ಪು ಸುಲ್ತಾನ್ ಪ್ರೆಂಡ್ಸ್ ಕಮಿಟಿ* (ರಿ) HTFC – ಟಿಪ್ಪು ನಗರ – ವಿಟ್ಲ, ಊರಿನ ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಧನ ಸಹಾಯದಲ್ಲಿ ನೆರವಾಗುವುದು ಮತ್ತು ರೋಗಿಗಳ ಚಿಕಿತ್ಸೆಯ ವೆಚ್ಚ ಭರಿಸಲು ನೆರವಾಗುವುದು ಈ ಸಮಿತಿಯ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಒಟ್ಟಿನಲ್ಲಿ ಈ … Read more

ಬಿಜೆಪಿ ಅವರಂತೆ ನಾವು ಹಣ ಹಂಚಿ ಮತ ಕೇಳುತ್ತಿಲ್ಲ, ಐದು ವರ್ಷದ ದುಡಿಮೆಗೆ ಕೂಲಿಯ ರೂಪದಲ್ಲಿ ಮತ ಕೇಳುತ್ತಿದ್ದೇವೆ : ಸಿದ್ದರಾಮಯ್ಯ

ಹಾನಗಲ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಯಾವುದಾದರೂ ಒಂದು ಜನಪರ ಯೋಜನೆಯ ಹೆಸರು ಹೇಳಲಿ ನೋಡೋಣ. ಅವರಿಂದ ಸಾಧ್ಯವಿದೆಯಾ? ತಮ್ಮ ಬಣ್ಣ ಬಯಲಾಗುತ್ತೆ ಎಂದು ಹೆದರಿ ಅವರು ಒಂದೇ ವೇದಿಕೆಗೆ ಚರ್ಚೆಗೆ ಬರಲು ನಿರಾಕರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಹಾನಗಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಪರವಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದರು. 2013 … Read more

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ : ಪಾಪ್ಯುಲರ್ ಫ್ರಂಟ್ ಖಂಡನೆ

ಬೆಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲಿನ ಹಿಂಸಾಚಾರವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ ಸಲಾಂ ಖಂಡಿಸಿದ್ದಾರೆ. ನೆರೆಯ ದೇಶದಲ್ಲಿ ಕೇಳಿ ಬರುತ್ತಿರುವ ಸಾವು ಮತ್ತು ವಿನಾಶದ ಸುದ್ದಿಗಳು ಅತ್ಯಂತ ಆತಂಕಕಾರಿ ಹಾಗೂ ದುರಾದೃಷ್ಟಕರವಾಗಿವೆ. ಕೆಲವು ಅನಧಿಕೃತ ಆರೋಪಗಳ ಆಧಾರದಲ್ಲಿ ಕಾನೂನನ್ನು ಕೈಗೆತ್ತಿಕೊಂಡು ಇತರ ಸಮುದಾಯಗಳಿಗೆ ಸೇರಿದ ಅಮಾಯಕರನ್ನು ಗುರಿಪಡಿಸುವ ವಿಚಾರ ಯಾವುದೇ ನಾಗರಿಕ ಸಮಾಜಕ್ಕೆ ಬೆದರಿಕೆಯಾಗಿದೆ. ಇತರರಿಗೆ ಪಾಠ ಕಲಿಸುವ ನಿಟ್ಟಿನಲ್ಲಿ ಇಂತಹ ಜನರನ್ನು ನಿಯಂತ್ರಿಸಿ ಶಿಕ್ಷೆಗೆ … Read more

ಅಕ್ಟೋಬರ್ 25 ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೋವಿಡ್ ಕಾರಣದಿಂದ ದೀರ್ಘ ಅವಧಿಯಿಂದ ಬಂದ್ ಆದ ಕಿರಿಯ ಪ್ರಾಥಮಿಕ ಶಾಲೆಗಳ ಪುನಾರಂಭಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ಶಾಲಾ ತರಗತಿಗಳನ್ನು (1ರಿಂದ 5) ಇದೇ ಅಕ್ಟೋಬರ್ 25 ರಿಂದ ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಪ್ರಾಥಮಿಕ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ತರಗತಿಯಲ್ಲಿ ಶೇ.50ರಷ್ಟು ಮಕ್ಕಳಿಗೆ … Read more

ನಿಮ್ಮ ತಂದೆಯಿಂದ ಏನಾದರೂ ಕಲಿತಿದ್ದರೆ, ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದೊಂದಿಗೆ ಹೇಗೆ ಸೇರಿಕೊಳ್ಳುತ್ತಿದ್ದೀರಿ? : ಬೊಮ್ಮಾಯಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು.ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ? ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ನೈತಿಕ ಪೋಲಿಸ್ ಗಿರಿ ಕುರಿತು ಸಿದ್ದರಾಮಯ್ಯ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯೆ ಶುರುವಾದ ಟ್ವಿಟ್ಟರ್ ವಾಗ್ವಾದ ಮತ್ತೆ ಮುಂದುವರಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಿಂದೂ ಸಂಘಟನೆಯ ನಾಯಕರ ಹತ್ಯೆ, ಟಿಪ್ಪು ಜಯಂತಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದರು. “ನಾನು ನಿಮ್ಮಿಂದ ಆಡಳಿತ ಮತ್ತು ಪೊಲೀಸಿಂಗ್ ಬಗ್ಗೆ ತಿಳಿಯಬೇಕಿಲ್ಲ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ. ಇಂತಹ ಬೇಜವಾಬ್ದಾರಿ ಹೇಳಿಕೆಗಿಂತ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು. ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು. ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

ನೀವು ಗೃಹಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ, ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿ ಕೊಡುತ್ತೇನೆ. ತನಿಖೆ ಮಾಡಿ ಜನರಿಗೆ ಸತ್ಯ ತಿಳಿಸಿ. 2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು ಎಂದಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ. ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ? ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.

ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷಿಸಿ.

ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ.
ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್. ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ
ನ್ಯಾಯ ಕೊಡಿಸಿ ಎಂದು ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ ಎಂದು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ ಗೋಳನ್ನು ಶೇರ್ ಮಾಡಿ ಟಾಂಗ್ ನೀಡಿದ್ದಾರೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಜಾತಿವಾರು ಸಮೀಕ್ಷೆಗೆ ನನ್ನ ವಿರೋಧವಿಲ್ಲ : ವಿಪಕ್ಷ ನಾಯಕ ಸಿದ್ದರಾಮಯ್ಯ

ಕಲ್ಬುರ್ಗಿ: ಕರ್ನಾಟಕ ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ನಡೆಸಿರುವುದು ಜಾತಿ ಸಮೀಕ್ಷೆ ಅಲ್ಲ, ಜಾತಿಯೂ ಸೇರಿದಂತೆ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ. ದುರುದ್ದೇಶದಿಂದ ಈ ಸಮೀಕ್ಷೆಯನ್ನು ಜಾತಿಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಸಮೀಕ್ಷೆಯಲ್ಲಿ ಯಾವುದೇ ಪಕ್ಷಪಾತ, ಪೂರ್ವಗ್ರಹಗಳಿಲ್ಲ. ಸಮೀಕ್ಷೆ ನಡೆಸಿದ ಶಿಕ್ಷಕರಲ್ಲಿ ಎಲ್ಲಾ ಜಾತಿ, ಸಮುದಾಯ, ಧರ್ಮಕ್ಕೆ ಸೇರಿದವರು ಇದ್ದಾರೆ. ಇದು ಯಾವ ಜಾತಿಯ ವಿರುದ್ಧವೂ ಅಲ್ಲ, ಯಾವ ಜಾತಿಯ ಪರವಾಗಿಯೂ ಅಲ್ಲ. ಸಾಮಾಜಿಕ ನ್ಯಾಯದ ಪರವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ … Read more

ಅರ್ಚಕರಿಗೆ, ಸಿಬ್ಬಂದಿಗೆ 6ನೇ ವೇತನ ಶ್ರೇಣಿ, ಆರೋಗ್ಯ ವಿಮೆ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ. ಇಂದು ವಿಕಾಸಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ನಮ್ಮ ಮುಜರಾಯಿ ಇಲಾಖೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಹಾಗೂ ವಿಶೇಷ ಯೋಜನೆಗಳನ್ನು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಘೋಷಣೆ ಮಾಡಿದರು. ಮುಜರಾಯಿ ಇಲಾಖೆಯ ಎ ಮತ್ತು ಬಿ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇ ವೇತನ ಶ್ರೇಣಿ ಸೌಲಭ್ಯ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 6 … Read more

ಗಡಿ ಜಿಲ್ಲೆ ಬೀದರ್ ನಲ್ಲಿ ಅಪರೂಪದ ‘ಕರಿನವಿಲು’ ಪತ್ತೆ

ಬೀದರ್ (ಔರಾದ್‌): ಬೀದರ್ ಜಿಲ್ಲೆಯ ಗಡಿ ಭಾಗದ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಎರಡು ಅಪರೂಪದ ಕರಿ ನವಿಲುಗಳು ಪತ್ತೆಯಾಗಿವೆ. ಔರಾದ್ ತಾಲ್ಲೂಕಿನ ಚಟ್ನಾಳ ಹಾಗೂ ಬೀದರ್ ಸಮೀಪದ ಚೊಂಡಿ ಗ್ರಾಮದ ಶಿವಾರ್ ದಲ್ಲಿ ಪತ್ತೆಯಾದ ಈ ಅಪರೂಪದ ನವಿಲುಗಳು ಪಕ್ಷಿ ಪ್ರೇಮಿಗಳ ಗಮನ ಸೆಳೆದಿವೆ. ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿಯ (ಬಿಎನ್‌ಎಚ್‌ಎಸ್) ನಿರ್ದೇಶಕ ಡಾ. ಬಿವಾಶ್‌ ಪಾಂಡವ್ ಅವರ ತಂಡ ಭಾನುವಾರ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಕರಿನವಿಲು ಚಿತ್ರಗಳನ್ನು ಕ್ಯಾಮೆರಾ ದಲ್ಲಿ ಸೆರೆ ಹಿಡಿದಿದ್ದಾರೆ. ಕರಿನವಿಲು … Read more

ಅಟೋ ರಿಕ್ಷಾ ಚಾಲಕ ಯಾ ಪ್ರಯಾಣಿಕರ ಪಾಲಿಗೊಂದು ಶುಭ ಸುದ್ದಿ | ಕೋವಿಡ್ ಸಮಯದಲ್ಲಿ ಅಟೋ ರಿಕ್ಷಾನೇ ಹೆಚ್ಚು ಸುರಕ್ಷಿತವೆಂದು ಅಧ್ಯಯನ ವರದಿ

ನವದೆಹಲಿ: ಕೋವಿಡ್ ಕಾರಣದಿಂದಾಗಿ ಅತಿ ಹೆಚ್ಚು ನಷ್ಟಕ್ಕೊಳಗಾದ ಕ್ಷೇತ್ರಗಳಲ್ಲಿ ಸಾರಿಗೆ–ಸಂಪರ್ಕವೂ ಒಂದು. ಕಾರು, ಬಸ್ಸು, ರಿಕ್ಷಾ ಮುಂತಾದ ವಾಹನಗಳಿಂದಲೇ ಜೀವನೋಪಾಯ ಮಾಡುತ್ತಿರುವವರಿಗೆ ಇದು ಮರ್ಮಾಘಾತ ನೀಡಿರುವುದು ಸುಳ್ಳಲ್ಲ. ಇದೀಗ ಅಟೋ ರಿಕ್ಷಾ ಚಾಲಕ ಮತ್ತು ಪ್ರಯಾಣಿಕರ ಪಾಲಿಗೆ ಶುಭ ಸುದ್ದಿಯೊಂದು ಬಂದಿದೆ. ಹೌದು.. ಕೋವಿಡ್ ಕಾಲದಲ್ಲಿ ಅಟೋ ರಿಕ್ಷಾ ಪ್ರಯಾಣವೇ ಅತ್ಯಂತ ಸುರಕ್ಷಿತ ಪ್ರಯಾಣ ಎಂಬುದನ್ನು ಅಧ್ಯಯನವು ತೋರಿಸಿಕೊಟ್ಟಿದೆ. ಅಮೇರಿಕಾದ ಮೇರಿಲ್ಯಾಂಡ್ ನಲ್ಲಿರುವ ಜೋನ್ಸ್ ಹೋಪ್ಕಿನ್ಸ್ ವಿಶ್ವವಿದ್ಯಾಲಯ (ಜೆಎಚ್‍ಯು) ದ ಅಧ್ಯಯನ ವರದಿಯಲ್ಲಿ ಈ ಅಂಶವು ಬೆಳಕಿಗೆ ಬಂದಿದೆ. ಎಸಿ (ಹವಾ ನಿಯಂತ್ರಕ) … Read more

ಈ ವರ್ಷದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಾಳೆಯಿಂದ ಆರಂಭ

ಬೆಂಗಳೂರು: 2021-22 ಶೈಕ್ಷಣಿಕ ವರ್ಷದ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ನಾಳೆಯಿಂದ ಆರಂಭವಾಗಲಿದೆ. ಶಾಲೆಗಳಿಗೆ ಮಕ್ಕಳ ಪ್ರವೇಶಾತಿ, ಅಧ್ಯಾಪಕರನ್ನು ಸಜ್ಜುಗೊಳಿಸುವುದು, ವಿವಿಧ ಪಠ್ಯಕ್ರಮಗಳನ್ನು ಬೋಧಿಸಲು ಸಮಯವನ್ನು ನಿಗದಿ ಪಡಿಸುವುದು ಮುಂತಾದ ಕಾರ್ಯಚಟುವಟಿಕೆಗಳು ನಾಳೆಯಿಂದ ಆರಂಭವಾಗಬಹುದು. ಶಾಲೆ ಆರಂಭಿಸುವ ಪೂರ್ವಭಾವಿ ಸಿದ್ಧತೆಗಳನ್ನು ಜೂನ್ 15 ರಿಂದ 30 ರವರೆಗೆ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ (2021-22) ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಈಗಾಗಲೇ ಪ್ರಕಟಿಸಿದೆ. 5ರಿಂದ 10ನೇ ತರಗತಿ … Read more