ಫೆ.14ರಿಂದ 19ರವರೆಗೆ ಉಡುಪಿ ಜಿಲ್ಲೆಯ ಪ್ರೌಢಶಾಲೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಉಡುಪಿ, ಫೆ.13: ಕೇಸರಿ ಶಾಲು-ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆ.14ರಿಂದ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್‍ ಎಂ. ಆದೇಶ ಹೊರಡಿಸಿದ್ದಾರೆ. 144 ಸೆಕ್ಷನ್ ನಡಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತಲ 200 ಮೀ. ವ್ಯಾಪ್ತಿಯಲ್ಲಿ ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ 50 ಸಾವಿರಕ್ಕಿಂತ ಕೆಳಗಿಳಿದ ದೈನಿಕ ಕೋವಿಡ್ ಪ್ರಕರಣ

ಹೊಸದಿಲ್ಲಿ: ದೇಶದಲ್ಲಿ ಶನಿವಾರ ದೈನಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕೆಳಗಿಳಿದಿದ್ದು, ಗರಿಷ್ಠ ಸಂಖ್ಯೆಯಾದ 3.5 ಲಕ್ಷವನ್ನು ತಲುಪಿದ ಜನವರಿ 20 ಕಳೆದ ಮೂರೇ ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿದಿದೆ. ಎರಡನೇ ಅಲೆಯಲ್ಲಿ ಕಂಡುಬಂದ ಇಳಿಕೆ ಪ್ರವೃತ್ತಿಗೆ ಹೋಲಿಸಿದರೆ ಈ ಬಾರಿ ದುಪ್ಪಟ್ಟು ವೇಗದಲ್ಲಿ ಪ್ರಕರಣಗಳು ಇಳಿಕೆಯಾಗಿವೆ. ಶನಿವಾರ ದೇಶಾದ್ಯಂತ 45,523 ಪ್ರಕರಣಗಳು ದಾಖಲಾಗಿದ್ದು, ಇದು ಜನವರಿ 3ರ ಬಳಿಕ ಕನಿಷ್ಠ ಸಂಖ್ಯೆಯಾಗಿದೆ. ದೈನಿಕ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕಿಂತ ಕಡಿಮೆಯಾದ ಆರೇ ದಿನಗಳಲ್ಲಿ … Read more

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಬೆಂಗಳೂರು: ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ದಿನಾಂಕ 08-02-2022 ರಂದು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ ದಿನಾಂಕ 21-4-2022ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿದ್ದು, ಒಂದೇ ವೇಳೆಯಲ್ಲಿ ಒಂದೇ ದಿನ ಎರಡು ವಿಷಯಗಳನ್ನು … Read more

ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮದುಮಗಳು ಮೃತ್ಯು

ಕೋಲಾರ: ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮದುಮಗಳು ಮೃತಪಟ್ಟ ಘಟನೆ ಕೋಲಾರದ ಶ್ರೀನಿವಾಸಪುರದಲ್ಲಿ ಶುಕ್ರವಾರ ನಡೆದಿದೆ. ಮದುವೆಯ ಆರತಕ್ಷತೆಯ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಚೈತ್ರಾ (26) ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭ ಪೋಷಕರನ್ನು ಸಮಾಧಾನಿಸಿದಂತ ವೈದ್ಯರೂ ಚೈತ್ರ ಸಾವನ್ನಪ್ಪಿದರೂ ಬೇರೆಯವರ ಬಾಳಿಗೆ ಬೆಳಕಾಗುವಂತೆ ಅಂಗಾಂಗ ದಾನ ಮಾಡಲು ಮನವೊಲಿಕೆ ಮಾಡಿದ್ದಾರೆ. ಮಗಳ ಬ್ರೈನ್ ಡೆಡ್ ಆಗಿರುವ ಬಗ್ಗೆ … Read more

ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು : ಸಚಿವ ಬಿ.ಸಿ ನಾಗೇಶ್‌ʼ ಮನವಿ

ಬೆಂಗಳೂರು : ಕೋರ್ಟ್‌ ಆದೇಶದಂತೆ ಫೆಬ್ರವರಿ 14ರಿಂದ 10ನೇ ತರಗತಿವರೆಗೆ ಶಾಲೆ ಪುನಾರಂಭ ಮಾಡುತ್ತಿದ್ದೇವೆ. ದಯವಿಟ್ಟು ಮಕ್ಕಳನ್ನ ಸಮವಸ್ತ್ರದಲ್ಲಿಯೇ ಕಳುಹಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ‘ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು. ದಯವಿಟ್ಟು ಸಮವಸ್ತ್ರದಲ್ಲೇ ವಿದ್ಯಾರ್ಥಿಗಳನ್ನ ಶಾಲೆಗೆ ಕಳುಹಿಸಿ. ಇನ್ನು ಇಂದು ಮತ್ತು ಸೋಮವಾರ ಮತ್ತೊಂದು ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಕಾಲೇಜು ಪುನಾರಂಭ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು. ಅಂದ್ಹಾಗೆ, ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ … Read more

ನಿನ್ನೆ ಕೇಸರಿ ಧ್ವಜ, ಇಂದು ತ್ರಿವರ್ಣ ಧ್ವಜ ಹಾರಿಸಿದ ಎನ್ ಎಸ್ ಯೂಐ ಘಟಕ

ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೇಸರಿ ಧ್ವಜ ಹಾರಿಸಿದ್ದ ಧ್ವಂಜಸ್ತಂಭದಲ್ಲಿ ಇಂದು ಮುಂಜಾನೆ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ಹಿಜಾಬ್ – ಕೇಸರಿ ಸಂಘರ್ಷ ನಡುವೆ ಮಂಗಳವಾರ ಧ್ವಂಜಸ್ತಂಭಕ್ಕೆ ಏರಿ ಕೇಸರಿ ಬಾವುಟ ಕಟ್ಟಲಾಗಿತ್ತು ಆದರೆ ಇಂದು ಅದೇ ಕಂಬಕ್ಕೆ ಎನ್ಎಸ್ ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಏಕತೆಯ ಶಾಂತಿಯ ಮಂತ್ರ ಪಠಿಸಿದರು . ಎನ್ಎಸ್ ಯುಐ ಕಾರ್ಯಕರ್ತರು ಹಿಜಾಬ್ – ಕೇಸರಿ ವಿಚಾರ ಬಿಟ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು, ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದ … Read more

ಹಿಮಪಾತದಲ್ಲಿ ನಾಪತ್ತೆಯಾಗಿದ್ದ 7 ಯೋಧರ ಮೃತದೇಹ ಪತ್ತೆ

ಹೊಸದಿಲ್ಲಿ: ಅರುಣಾಚಲಪ್ರದೇಶದ ಕೆಮಾಂಗ್ ವಲಯದ ಅತಿ ಎತ್ತರದ ಪ್ರದೇಶದಲ್ಲಿ ಫೆಬ್ರವರಿ 6ರಂದು ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ ಎಲ್ಲ 7 ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಹಿಮಪಾತ ಸಂಭವಿಸಿದ ಪ್ರದೇಶದಿಂದ ಯೋಧರ ಮೃತದೇಹಗಳನ್ನು ರ ತೆಗೆಯಲಾಗಿದೆ ಎಂದು ಸೇನೆ ಹೇಳಿದೆ.   ಯೋಧರ ಸಾವಿಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅರುಣಾಚಲಪ್ರದೇಶದ ಕೆಮಾಂಗ್ ವಲಯದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿ ಯೋಧರು ಮೃತಪಟ್ಟಿರುವುದು ನನ್ನ ಮನಸ್ಸಿಗೆ ತೀವ್ರ ನೋವು … Read more

ಭಾರತದಲ್ಲಿಂದು 2,51,209 ಕೊರೊನಾ ಕೇಸ್ ಪತ್ತೆ, 627 ಮಂದಿ ಸಾವು

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2,51,209 ಹೊಸ #COVID19 ಪ್ರಕರಣಗಳು, 627 ಸಾವುಗಳು … Read more

ಕೇಸರಿ ಶಾಲು ಹಾಕಿಕೊಂಡು ಬಂದ ಒಂದೇ ಕಾಲೇಜಿನ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಸ್ಪೆಂಡ್

ಹಾಸನ(08-02-2022): ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಹಾಸನದಲ್ಲೂ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿಗಳು ಕಾಲೇಜಿಗ ಬಂದಿದ್ದು, 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಮಾನತು ಮಾಡಿದ್ದಾರೆ. ಹಾಸನ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದರು. ಈ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಮಾನತು ​ ಮಾಡಿದ್ದಾರೆ. ಅಮಾನತು ಆದೇಶದಿಂದ ವಿದ್ಯಾರ್ಥಿಗಳು ಕಾಲೇಜಿನ ಹೊರಗಡೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಮಂಗಳೂರಿನ ಪತಿಯ ಪ್ಲಾಟ್ ನಲ್ಲಿ ಹಪೀಪಾ ಮೃತ ಸ್ಥಿತಿಯಲ್ಲಿ‌ ಪತ್ತೆ; ಕೊಲೆ‌ ಎಂದು ದೂರು ದಾಖಲು

ಮಂಗಳೂರು: ಕಳೆದ ವಾರ ಮಂಗಳೂರಿನ ಪಳ್ನೀರ್ ಪ್ಲಾಟ್ ವೊಂದರಲ್ಲಿ ಯುವತಿಯ ನಿಗೂಢ ಸಾವು ನಡೆದಿತ್ತು. ಈ ಬಗ್ಗೆ ಮೃತ ಯುವತಿಯ ತಂದೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಶಂಕಿಸಿ‌ ಪೊಲೀಸರಿಗೆ ದೂರು ನೀಡಿದ್ದಾರೆ.ಫಳ್ನೀರ್ ಫ್ಲ್ಯಾಟ್ ನ ಪತಿ ಮನೆಯಲ್ಲಿ ಹಫೀಫಾ (26) ಎಂಬ ಯುವತಿ ಜ.30ರಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದರು.ಅವರ ಪತಿ ಮಿಶಾಬ್ ಮತ್ತು ಆತನ ತಾಯಿ ರಝಿಯಾ ಕೊಲೆ ಮಾಡಿದ್ದಾರೆ ಎಂದು ಮೃತ ಯುವತಿಯ ತಂದೆ ಹಸನಬ್ಬ ದೂರು ದಾಖಲಿಸಿದ್ದಾರೆ. ದೂರನ್ನು ಆಧರಿಸಿ ಇಬ್ಬರನ್ನು … Read more