ಕಟೀಲ್ ಕೇವಲ ಜೋಕರ್ ಮಾತ್ರ ಅಲ್ಲ, ಸಂಸ್ಕಾರವೇ ಇಲ್ಲದ ಅತ್ಯಂತ ತುಚ್ಛ ವ್ಯಕ್ತಿ ಕೂಡ ಹೌದು : ದಿನೇಶ್ ಗುಂಡೂರಾವ್ ತಿರುಗೇಟು

ಬೆಂಗಳೂರು: ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದಿರುವ ಕಟೀಲ್ ಕೇವಲ ಜೋಕರ್ ಮಾತ್ರ ಅಲ್ಲ, ಸಂಸ್ಕಾರವೇ ಇಲ್ಲದ ಅತ್ಯಂತ ತುಚ್ಛ ವ್ಯಕ್ತಿ ಕೂಡ ಹೌದು. ಶತಮಾನದ ಶ್ರೇಷ್ಟ ಅವಿವೇಕಿಯಂತೆ ವರ್ತಿಸುವ ಕಟೀಲ್‌ರವರಿಗೆ ಬಹುಶಃ ಡ್ರಗ್ಸ್ ತೆಗೆದುಕೊಳ್ಳುವ ಅಭ್ಯಾಸವಿರಬಹುದು.ಆ ಡ್ರಗ್ಸ್ ನಶೆಯಲ್ಲೇ ಕಟೀಲ್ ಇಂತಹ ಅಸಂಬದ್ಧ ಮಾತುಗಳನ್ನು ಆಡುತ್ತಾರೆನೋ? ಎಂದು ಕೆಪಿಸಿಸಿ ವಕ್ತಾರ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿಯವರನ್ನು “ಡ್ರಗ್ ಪೆಡ್ಲರ್” ಎಂದು ಕರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಂಗ್ರೆಸ್ ವಕ್ತಾರ ದಿನೇಶ್ ಗುಂಡೂರಾವ್ ಮಾತಿನ ಚಾಟಿ ಬೀಸಿದ್ದಾರೆ.

ಕಟೀಲ್‌ರವರು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಭ್ಯತೆಯಿಂದ ಮಾತನಾಡುವ ಸಂಸ್ಕೃತಿ ಕಲಿಯಲಿ. ಇಲ್ಲವೇ ಈ ರೀತಿ ಮಾತನಾಡುವುದು RSS ಕಲಿಸಿದ ಸಂಸ್ಕಾರ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಲಿ.ಕುಲವಂ ನಾಲಗೆ ನುಡಿಯಿತು ಎಂಬಂತೆ ಕಟೀಲ್‌ರವರ ಸಂಸ್ಕಾರ ಮತ್ತು ಸಂಸ್ಕೃತಿಯೇನು ಎಂಬುದು ಅವರ ಮಾತಿನಿಂದಲೇ ತಿಳಿಯುತ್ತದೆ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಹಾಗೂ ಸಂಸದರಾಗಿ ರಾಹುಲ್ ಗಾಂಧಿಯವರ ಬಗ್ಗೆ ಅತ್ಯಂತ ಕೀಳುಮಟ್ಟದ ಹಾಗೂ ಆಧಾರರಹಿತ ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ಕಟೀಲ್‌ರವರ ಕೊಳಕು‌ ಮನಃಸ್ಥಿತಿಯನ್ನು ಅನಾವರಣ ಮಾಡಿದೆ. ಸಂಸ್ಕೃತಿ ಮತ್ತು ದೇವರ ಬಗ್ಗೆ ಮಾತನಾಡುವ ಬಿಜೆಪಿಯವರ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ. ಆ ಬಗ್ಗೆ ಕ್ರಮವೇನು.? ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡಲು ಕಟೀಲ್‌ರವರಿಗೆ ಯಾವ ನೈತಿಕತೆಯಿದೆ. ರಾಜೀವ್‌ ಗಾಂಧಿ, ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಹೆಗ್ಗಳಿಕೆ ನೆಹರೂ ಕುಟುಂಬದವರದ್ದು. ದೇಶಕ್ಕಾಗಿ ಬಿಜೆಪಿಯವರ ತ್ಯಾಗವೇನು.? ಕಟೀಲ್‌ರವರ ಕೊಡುಗೆಯೇನು.?

 

BJPಯವರಿಗೆ ಸಂಸ್ಕಾರದ ಗಂಧ ಗಾಳಿ ಗೊತ್ತಿದ್ದರೆ, ಹಾಗೂ ಸಾರ್ವಜನಿಕ ಭಾಷಾ ಪ್ರಯೋಗದ ಅರಿವಿದ್ದರೆ, ಅವಿವೇಕತನದ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಕಟೀಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಕಟೀಲ್‌ರಂತಹ ಶುದ್ಧ ಅಜ್ಞಾನಿಗಳಿಗೆ ಅಧ್ಯಕ್ಷ ಪಟ್ಟ ಕೊಟ್ಟ ತಮ್ಮ ಅಜ್ಞಾನವನ್ನು ಮತ್ತು ತಪ್ಪನ್ನು BJPಯವರು ಇನ್ನಾದರೂ ತಿದ್ದಿಕೊಳ್ಳಲಿ. ಇದು BJPಯ ನೈತಿಕತೆಯ ಪ್ರಶ್ನೆ ಎಂದು ದಿನೇಶ್ ಗುಂಡೂರಾವ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯುಪಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಹಿಳೆಯರಿಗೆ ಶೇ.40 ರಷ್ಟು ಟಿಕೆಟ್ ವಿತರಣೆ : ಪ್ರಿಯಾಂಕಾ ಗಾಂಧಿ

ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಶೇ.40% ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಘೋಷಿಸಿದ್ದಾರೆ. 2022 ರಲ್ಲಿ ಉತ್ತರ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯ ನಿಮಿತ್ತವಾಗಿ ಯುಪಿಯ ಉಸ್ತುವಾರಿ ವಹಿಸಿಕೊಂಡು ಸನ್ನದ್ಧರಾದ ಪ್ರಿಯಾಂಕಾ ಗಾಂಧಿ ಇಂದು ಲಕ್ನೋದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷವು ರಾಜ್ಯದ ಒಟ್ಟು ಚುನಾವಣಾ ಟಿಕೆಟ್‌ಗಳಲ್ಲಿ 40% ಪ್ರತಿಶತದಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಹಾಗೂ … Read more

ಅನಾಚಾರವೆಂಬುದು ಬಿಜೆಪಿ ಕಾಯಕ, ದಿನನಿತ್ಯದ ಚಾಳಿ : ಬಿಜೆಪಿ ವಿರುದ್ಧ ಜೆಡಿಎಸ್ ಟ್ವೀಟರ್ ಸಮರ

ಬೆಂಗಳೂರು: ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಬಿಜೆಪಿ ವಿರುದ್ಧ ರಾಜ್ಯ ಜೆಡಿಎಸ್ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಜೆಡಿಎಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು?

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ಪಟ್ಟಿ ಮಾಡುತ್ತಾ ಹೋದರೆ ಅದೇ ದೊಡ್ಡ ಧಾರಾವಾಹಿ ಆಗುತ್ತದೆ. ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದೆ.

ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯುಪಿಎಸ್ಸಿಗೆ ಸಮೀಕರಣ ಮಾಡಿ ಕೆಪಿಎಸ್ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆಪಿಎಸ್ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಹೆಚ್.ಡಿ.ಕುಮಾರಸ್ವಾಮಿ ಅವರೆಂದೂ ಕೆಪಿಎಸ್ಸಿಯನ್ನು ದುರುಪಯೋಗ ಮಾಡಿಕೊಂಡಿಲ್ಲ ಎಂದು ಉತ್ತರಿಸಿದೆ.

2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ಜತೆಗೆ, ಅವರು ಅನೇಕರಿಗೆ ಉದ್ಯೋಗ, ಜೀವನೋಪಾಯ ಕಲ್ಪಿಸಿದ್ದಾರೆ. ಅದೂ ಅರ್ಹತೆಯನ್ನು ಆಧರಿಸಿ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ಗರ್ಭಗುಡಿಯಲ್ಲಿರುವ ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಬಿಜೆಪಿಗೆ ಪ್ರತಿಕ್ರಿಯಿಸಿದೆ.

 

ಕೆಪಿಎಸ್ಸಿಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆಪಿಎಸ್ಸಿಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಜನತಾದಳ ಟ್ವೀಟ್ ವಾರ್ ನಡೆಸಿದೆ.

ರೈತ ಮುಷ್ಕರ-ಅಲ್ಲಿ ರೈತರೇ ಏಕಿರಬೇಕು ? ಕೃಷಿ ಬಿಕ್ಕಟ್ಟು ಕೇವಲ ರೈತರ ಸಮಸ್ಯೆಯೇ ?

ರೈತ ಮುಷ್ಕರ-ಅಲ್ಲಿ ರೈತರೇ ಏಕಿರಬೇಕು ? ಕೃಷಿ ಬಿಕ್ಕಟ್ಟು ಕೇವಲ ರೈತರ ಸಮಸ್ಯೆಯೇ ? – ನಾ ದಿವಾಕರ, ಹಿರಿಯ ಲೇಖಕರು ಸಮಕಾಲೀನ ಇತಿಹಾಸದಲ್ಲಿ ಕಂಡು ಕೇಳರಿಯದಂತಹ ಒಂದು ಸಾರ್ವಜನಿಕ ಮುಷ್ಕರ ದೆಹಲಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ನಡೆಯುತ್ತಿದೆ. ಈ ಮುಷ್ಕರದ ರೂವಾರಿಗಳು ದೇಶದ ರೈತಾಪಿ ಸಮುದಾಯ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂಬ ದೃಢ ನಿರ್ಧಾರದೊಂದಿಗೆ ಲಕ್ಷಾಂತರ ರೈತರು ಕಳೆದ ಹತ್ತು ತಿಂಗಳ ಕಾಲ ಮಳೆ, … Read more

ಅಕ್ಟೋಬರ್ 25 ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೋವಿಡ್ ಕಾರಣದಿಂದ ದೀರ್ಘ ಅವಧಿಯಿಂದ ಬಂದ್ ಆದ ಕಿರಿಯ ಪ್ರಾಥಮಿಕ ಶಾಲೆಗಳ ಪುನಾರಂಭಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ಶಾಲಾ ತರಗತಿಗಳನ್ನು (1ರಿಂದ 5) ಇದೇ ಅಕ್ಟೋಬರ್ 25 ರಿಂದ ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಪ್ರಾಥಮಿಕ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ತರಗತಿಯಲ್ಲಿ ಶೇ.50ರಷ್ಟು ಮಕ್ಕಳಿಗೆ … Read more

ಹೆಬ್ಬೆಟ್‌ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ: ರಾಜ್ಯ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ ₹66, ಡೀಸೆಲ್ ₹55 ಕ್ಕೆ ದೊರಕುತ್ತಿತ್ತು ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ರನಲ್ಲಿ ಅಭಿಪ್ರಾಯಪಟ್ಟಿದೆ.

ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ #ಹೆಬ್ಬೆಟ್ಟುಗಿರಾಕಿಮೋದಿ ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ಬಿಜೆಪಿ ಆಡಳಿತ ವ್ಯವಸ್ಥೆಯನ್ನು ತೀವ್ರವಾಗಿ ಖಂಡಿಸಿದೆ.

ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಕೇಂದ್ರ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ #ಹೆಬ್ಬೆಟ್‌ಗಿರಾಕಿಮೋದಿ ಯಿಂದ ದೇಶ ನಲುಗುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ. ಬೆಲೆ ಏರಿಕೆಯ ಬಗ್ಗೆ -ಮೌನ, ಕಾಶ್ಮೀರದ ದಳ್ಳುರಿಗೆ -ಮೌನ, ಚೀನಾ ಅತಿಕ್ರಮಣಕ್ಕೆ -ಮೌನ, ರೈತರ ಹತ್ಯೆಗೆ -ಮೌನ, ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ, ನಿರುದ್ಯೋಗದ ಬಗ್ಗೆ -ಮೌನ, ಪತ್ರಿಕಾಗೋಷ್ಠಿಗೆ ಮೌನ ಈ #ಹೆಬ್ಬೆ‌ಟ್‌ಗಿರಾಕಿಮೋದಿ ಎಂದು ಟ್ವೀಟ್ ಮಾಡಿದೆ.

ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ, ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿ ಯಿಂದ ದೇಶ ನರಳುತ್ತಿದೆ ಎಂದಿದೆ.

ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ!ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ!ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ!ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ! #ಹೆಬ್ಬೆಟ್‌ಗಿರಾಕಿಮೋದಿ

👉 ಇಂಧನ ತೈಲಗಳಲ್ಲಿ ಏರಿದ ಸರಕಾರದ ಆದಾಯ.
2014 = ರೂ. 75 ಸಾವಿರ ಕೋಟಿ
2021 = ರೂ. 3.25 ಲಕ್ಷ ಕೋಟಿ.

👉ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿತ. 2014ರಲ್ಲಿ- 55,2021ರಲ್ಲಿ – 101ಸರ್ಕಾರದ ಆದಾಯ ಹೆಚ್ಚಿದಂತೆ, ಭಾರತದಲ್ಲಿ ಬಡತನವೂ ಹೆಚ್ಚುತ್ತಿದೆ. #ಹೆಬ್ಬೆಟ್‌ಗಿರಾಕಿಮೋದಿ ಸರ್ಕಾರದ ಆದಾಯವನ್ನು ಯಾರ ಜೇಬಿಗೆ ತುಂಬುತ್ತಿದ್ದಾರೆ? ಎಂದು ಕಾಂಗ್ರೆಸ್ಆರೋಪಿಸಿದೆ.

ಅದೇನು ಮಾಯವೋ! ಅತ್ಯಾಚಾರಿ ಬಾಬಾಗಳು, ಡ್ರಗ್ಸ್ ದಂಧೆಕೋರರು, ವಂಚಕರು ಎಲ್ಲರಿಗೂ ಮೋದಿಯೊಂದಿಗೆ ನಂಟಿರುತ್ತದೆ. ಅವರೆಲ್ಲರ ಹಗರಣದಲ್ಲಿ #ಹೆಬ್ಬೆಟ್‌ಗಿರಾಕಿಮೋದಿ ಯ ಪಾಲೆಷ್ಟು? ಅದಾನಿ ಪೋರ್ಟ್ ಡ್ರಗ್ಸ್ ಪ್ರಕರಣದಲ್ಲಿ ಮೋದಿಗೆ ಸಿಕ್ಕ ಕಿಕ್ ಬ್ಯಾಕ್ ಎಷ್ಟು? ಬಸ್ ಡ್ರೈವರ್ ಉಮೇಶನ ಲೂಟಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ನಾಯಕರಿಗಾದ ಹಂಚಿಕೆ ಎಷ್ಟು? ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.

ಪೊಲೀಸರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ವಿಜಯ ದಶಮಿ ಹಬ್ಬದ ನಿಮಿತ್ತವಾಗಿ ವಿಜಾಪೂರ ಠಾಣೆಯ ಪೋಲೀಸರು ಕೇಸರಿ ಶಾಲು ಹಾಕಿಕೊಂಡಿರುವ ಗ್ರೂಪ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಂದೆಡೆ ಅಮಾಯಕ ಯುವಕ- ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ, ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ, ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ….ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಮುಖ್ಯಮಂತ್ರಿಗಳು ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ, ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ ಎಂದು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ ಮುಖ್ಯಮಂತ್ರಿಗಳೇ. ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಸಿಎಂ ಬೊಮ್ಮಾಯಿ ಅವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡದ ಹಿರಿಯ ರಂಗಕರ್ಮಿ ಚಿಂತಕ ಜಿ.ಕೆ.ಗೋವಿಂದ ರಾವ್ (86) ನಿಧನ

ಬೆಂಗಳೂರು: ಹಿರಿಯ ರಂಗಕರ್ಮಿ, ಸಾಹಿತಿ, ಚಿಂತಕ ಜಿ.ಕೆ.ಗೋವಿಂದ ರಾವ್ (86) ಇಂದು ವಿಧಿವಶರಾಗಿದ್ದಾರೆ. ಗೋವಿಂದ ರಾವ್ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದು ತಿಳಿದು ಬಂದಿದೆ.

ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿತ್ತು.

ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜಿ.ಕೆ. ಗೋವಿಂದರಾವ್ ನಿಧನದ ಸುದ್ದಿಗೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ”ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ. ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿ.ಕೆ.ಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ,” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

 

ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಶರಣರಿಗೆ “ಮರಣವೆ ಮಹಾನವಮಿ”

ಯುವ ಲೇಖಕ ಬಾಲಾಜಿ ಕುಂಬಾರ ಅವರ ಬರಹ ನಿಮ್ಮ ಓದಿಗಾಗಿ….. ಬಸವಣ್ಣ ಹಾಗೂ ಸಮಕಾಲೀನ ಶರಣರು ಕಟ್ಟಲು ಬಯಸಿದ ಸಮಾಜವನ್ನು ‘ಸಮಾನತೆ ಸಮಾಜ’ ಎಂದು ಕರೆಯುತ್ತೇವೆ. ಅದು ವರ್ಗರಹಿತ, ವರ್ಣರಹಿತ, ಲಿಂಗರಹಿತ ಹಾಗೂ ಜಾತಿರಹಿತವಾದ ಜಾತ್ಯತೀತ ಸಮಾಜ ನಿರ್ಮಿಸುವುದು ವಚನಕಾರರ ಘನವಾದ ಉದ್ದೇಶವೂ ಕೂಡ ಹೌದು. ಹಾಗಾಗಿ ಅದಕ್ಕಾಗಿಯೇ ಬಹುತೇಕ ಶರಣರು ಪ್ರಾಣತ್ಯಾಗ ಮಾಡಿದ್ದು ಇತಿಹಾಸವೇ ಸಾಕ್ಷಿ. ಹನ್ನೆರಡನೇ ಶತಮಾನದ ಅಂದಿನ ರಾಜ್ಯಶಾಹಿ ಆಡಳಿತ ವ್ಯವಸ್ಥೆಯು ಸ್ಥಳೀಯ ರೈತಾಪಿ ವರ್ಗ, ಕೂಲಿಕಾರ್ಮಿಕರ ಮೇಲೆ ರಾಜ್ಯಭಾರ ನಡೆಸುತ್ತಾ ತೀವ್ರವಾಗಿ ಶೋಷಣೆಗೆ … Read more

ನಿಮ್ಮ ತಂದೆಯಿಂದ ಏನಾದರೂ ಕಲಿತಿದ್ದರೆ, ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದೊಂದಿಗೆ ಹೇಗೆ ಸೇರಿಕೊಳ್ಳುತ್ತಿದ್ದೀರಿ? : ಬೊಮ್ಮಾಯಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು.ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ? ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ನೈತಿಕ ಪೋಲಿಸ್ ಗಿರಿ ಕುರಿತು ಸಿದ್ದರಾಮಯ್ಯ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯೆ ಶುರುವಾದ ಟ್ವಿಟ್ಟರ್ ವಾಗ್ವಾದ ಮತ್ತೆ ಮುಂದುವರಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಿಂದೂ ಸಂಘಟನೆಯ ನಾಯಕರ ಹತ್ಯೆ, ಟಿಪ್ಪು ಜಯಂತಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದರು. “ನಾನು ನಿಮ್ಮಿಂದ ಆಡಳಿತ ಮತ್ತು ಪೊಲೀಸಿಂಗ್ ಬಗ್ಗೆ ತಿಳಿಯಬೇಕಿಲ್ಲ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ. ಇಂತಹ ಬೇಜವಾಬ್ದಾರಿ ಹೇಳಿಕೆಗಿಂತ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು. ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು. ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

ನೀವು ಗೃಹಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ, ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿ ಕೊಡುತ್ತೇನೆ. ತನಿಖೆ ಮಾಡಿ ಜನರಿಗೆ ಸತ್ಯ ತಿಳಿಸಿ. 2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು ಎಂದಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ. ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ? ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.

ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷಿಸಿ.

ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ.
ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್. ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ
ನ್ಯಾಯ ಕೊಡಿಸಿ ಎಂದು ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ ಎಂದು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ ಗೋಳನ್ನು ಶೇರ್ ಮಾಡಿ ಟಾಂಗ್ ನೀಡಿದ್ದಾರೆ.