ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ.

ಉಡುಪಿ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾನೆ. ಕಳೆದ ರಾತ್ರಿ ಮನೆ ಪಕ್ಕದಲ್ಲಿ ರೀನಾ ಡಿಸೋಜಾ ಅವರು ತನ್ನ ಗೆಳತಿ ಜೊತೆ ಮಾತನಾಡುತ್ತಿದ್ದಾಗ, ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ನಡೆಯುವ ಸಂದರ್ಭದಲ್ಲಿ ನೇರವಾಗಿ ರೀನಾ ಅವರಿಗೆ ಚಾಕು ಇರಿದಿದ್ದಾನೆ. ಕೂಡಲೇ ಸ್ಥಳೀಯರು ರೀನಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. … Read more

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ

ಮೈಸೂರು: ಜನರ ಜೀವನ, ಜೀವ ಎರಡೂ ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ‌. ಜೀವನ ಉಳಿಯಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆರವುಗೊಳಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ. ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು? ಈಗಾಗಲೇ ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಜಾಥಾಗಳನ್ನು ಮಾಡಲಾಗುತ್ತದೆ. ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತ ಜನರನ್ಮು ಸಂಕಷ್ಟಕ್ಕೀಡು ಮಾಡಬೇಕು ಎಂದು ಅವರು ತಮ್ಮದೇ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ಜನ … Read more

ಉತ್ತರ ಪ್ರದೇಶ: ಬಿಜೆಪಿ ಪ್ರಚಾರಕರ ಪಟ್ಟಿಯಲ್ಲಿ ಮೇನಕಾ, ವರುಣ್ ಗಾಂಧಿಗೆ ಸ್ಥಾನವಿಲ್ಲ

ಲಕ್ನೊ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ಸ್ಟಾರ್ ಪ್ರಚಾರಕರು ಪಟ್ಟಿಯಲ್ಲಿದ್ದರೆ, ಪಕ್ಷದ ಸಂಸದರು ಹಾಗೂ ತಾಯಿ-ಮಗ ಜೋಡಿಯಾದ ಮೇನಕಾ ಗಾಂಧಿ ಹಾಗೂ ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಇವರಿಬ್ಬರು ಸುಲ್ತಾನ್‌ಪುರ ಹಾಗೂ ಪಿಲಿಭಿತ್‌ ಲೋಕಸಭಾ ಕ್ಷೇತ್ರದಿಂದ ಹಲವು ಬಾರಿ ವಿಜಯಶಾಲಿಯಾಗಿದ್ದಾರೆ. ಇತ್ತೀಚೆಗಷ್ಟೇ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ … Read more

ದ್ವೇಷಭಾಷಣ ಪ್ರಕರಣಕ್ಕೆ ಸಂಬಂಧಿಸಿ ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು: ವರದಿ

ಹೊಸದಿಲ್ಲಿ: ಕಳೆದ ತಿಂಗಳು ಹರಿದ್ವಾರದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನಂದ ಅವರನ್ನು ಬಂಧಿಸಿದ ಎರಡು ದಿನಗಳ ನಂತರ ಅವರ ವಿರುದ್ಧ ಇದೀಗ ದ್ವೇಷಪೂರಿತ ಭಾಷಣ ಪ್ರಕರಣ ದಾಖಲಾಗಿದೆ ಎಂದು NDTV ವರದಿ ಮಾಡಿದೆ. ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಅವರನ್ನು ಆರಂಭದಲ್ಲಿ ಬಂಧಿಸಲಾಯಿತು ಹಾಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಆದರೆ ರಿಮಾಂಡ್ ಅರ್ಜಿಯಲ್ಲಿ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣವನ್ನೂ ಉಲ್ಲೇಖಿಸಲಾಗಿದೆ. ಯತಿ ನರಸಿಂಹಾನಂದ ಅವರನ್ನು 14 ದಿನಗಳ … Read more

J D U ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧಾರ.

ಪಟ್ನಾ: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನನ್ನು ಮಿತ್ರಪಕ್ಷವೆಂದು ಪರಿಗಣಿಸದಿರುವ ಹಿನ್ನೆಲೆಯಲ್ಲಿ ಜೆಡಿಯು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಬಿಹಾರದ ಆಡಳಿರೂಢ ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ಪಾಲುದಾರ ಪಕ್ಷಗಳಾಗಿವೆ. ಲಕ್ನೋದಲ್ಲಿ ಜನವರಿ 18ರಂದು ತನ್ನ ಪಕ್ಷದ ಹಿರಿಯ ನಾಯಕರ ಸಭೆ ನಡೆಯಲಿದ್ದು, ಆ ದಿನವೇ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜೆಡಿಯು ಉತ್ತರಪ್ರದೇಶ ಘಟಕದ ಅಧ್ಯಕ್ಷ ಅನೂಪ್ ಸಿಂಗ್ ಪಟೇಲ್ ಶನಿವಾರ ತಿಳಿಸಿದ್ದಾರೆ. ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊಸದಿಲ್ಲಿಯಲ್ಲಿ … Read more

 ಬಿಜೆಪಿಯ ದ್ವೇಷ ರಾಜಕಾರಣ ದೇಶಕ್ಕೆ ಗಂಡಾಂತರ ತರಲಿದೆ: ರಾಹುಲ್‌ ಗಾಂಧಿ

ಹೊಸದಿಲ್ಲಿ: ಬಿಜೆಪಿಯ ದ್ವೇಷ ರಾಜಕಾರಣ ಈ ದೇಶಕ್ಕೆ ಗಂಡಾಂತರ ತಂದೊಡ್ಡಲಿದೆ.  ಈ ದ್ವೇಷಪೂರಿತ ವಾತಾವರಣವೇ ನಿರುದ್ಯೋಗಕ್ಕೂ ಕಾರಣವಾಗಿದೆ. ಸ್ಥಳೀಯ ಹಾಗೂ  ವಿದೇಶಿ ಕಂಪೆನಿಗಳು ಸಾಮಾಜಿಕ ಶಾಂತಿಯಿಲ್ಲದೇ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ನಮ್ಮ ನಿಮ್ಮೆಲ್ಲರ ನಡುವೆ ದಿನಂಪ್ರತಿ ಹರಡುತ್ತಿರುವ ಈ ದ್ವೇಷವನ್ನು ಕೊನೆಗಾಣಿಸಲು ಪ್ರಯತ್ನಿಸುತ್ತೇನೆ. ನೀವು ನನ್ನ ಜೊತೆಗಿದ್ದೀರಾ?ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಹಿಂದಿಯಲ್ಲಿ ಟ್ವೀಟಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೋನ ಪಾಸಿಟಿವ್

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪೋಸಿಟಿವ್ ಧೃಡ ಪಟ್ಟಿದ್ದನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅವರು, ನಾನು ಆರೋಗ್ಯವಾಗಿದ್ದೇನೆ. ನನ್ನೊಂದಿಗೆ ಸಂಪರ್ಕಮಾಡಿದವರು ಆದಷ್ಟು ಬೇಗ ಕೋವಿಡ್ ಪರೀಕ್ಷೆ ನಡೆಸಿ ಎಂದು ಟ್ವೀಟ್ ಮಾಡಿದ್ದಾರೆ.

ಗೋವಾ: ಬಿಜೆಪಿ ಶಾಸಕ ಸಚಿವ ಸ್ಥಾನಕ್ಕೆ ರಾಜಿನಾಮೆ

ಪಣಜಿ: ಗೋವಾ ಸಚಿವ ಮತ್ತು ಬಿಜೆಪಿ ಶಾಸಕ ಮೈಕೆಲ್ ಲೋಬೋ ಅವರು ಪ್ರಮೋದ್ ಸಾವಂತ್ ನೇತೃತ್ವದ ಸಚಿವಾಲಯಕ್ಕೆ ಮತ್ತು ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆಗೆ ಮುನ್ನ ವಿಧಾನಸಭೆಯ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಕಲಾಂಗುಟ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಲೋಬೋ ಅವರು ಮುಖ್ಯಮಂತ್ರಿ ಕಚೇರಿ ಮತ್ತು ಗೋವಾ ವಿಧಾನಸಭಾ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. “ನಾನು ಎರಡೂ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ. ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ನಾನೇ ತೀರ್ಮಾನಿಸುತ್ತೇನೆ. ನಾನು ಬಿಜೆಪಿಗೆ ಕೂಡಾ ರಾಜೀನಾಮೆ … Read more

*ಪ್ರಧಾನಿಗೆ ಎಲ್ಲಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು:ಪಂಜಾಬ್‌ ಸರ್ಕಾರ*

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ರಸ್ತೆ ಪ್ರಯಾಣದ ಬಗ್ಗೆ ಪಂಜಾಬ್ ಪೊಲೀಸರಿಗೆ ಮೊದಲೇ ಮಾಹಿತಿ ನೀಡಲಾಗಿತ್ತು, ಭದ್ರತೆ ನೀಡಲಾಗಿತ್ತು ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಂದ ಅನುಮತಿ ಪಡೆದ ನಂತರವೇ ಅದನ್ನು ಕೈಗೊಳ್ಳಲಾಯಿತು ಎಂದು ಪಂಜಾಬ್‌ನಲ್ಲಿ ಭದ್ರತಾ ಲೋಪದ ಒಂದು ದಿನದ ನಂತರ ಸರ್ಕಾರಿ ಮೂಲಗಳು ತಿಳಿಸಿವೆ. ನಿನ್ನೆ, ಫಿರೋಜ್‌ಪುರದಲ್ಲಿ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ತೆರಳುತ್ತಿದ್ದ ಪ್ರಧಾನಿ ಮೋದಿ ಅವರು ಪಂಜಾಬ್‌ನ ಬಟಿಂಡಾದಲ್ಲಿ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿಕೊಂಡಿದ್ದರು. ಪ್ರತಿಭಟನಾಕಾರ ರೈತರು ರಸ್ತೆಯನ್ನು ತಡೆದಿದ್ದರು. … Read more

ಬಿಜೆಪಿ ಪಕ್ಷ ಮತ್ತು ಸಚಿವ ಸಂಪುಟಗಳಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಯಾಗಲಿಕ್ಕಿದೆ – ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪಾಟೀಲ್

ಸಂಕ್ರಾಂತಿಯ ನಂತರ ರಾಜ್ಯ ಸಚಿವ ಸಂಪುಟ , ಪಕ್ಷಗಳಲ್ಲಿ ಬದಲಾವಣೆಯಾಗಲಿದ್ದು, ನನಗೆ ಪಕ್ಷದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಲೀ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವರಿಷ್ಠರು ಕ್ರಮ ಈ ಕೈಗೊಳ್ಳಲಿಕ್ಕಿದ್ದಾರೆ. ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತಂತೆ ಪ್ರಧಾನಿ ಮತ್ತು ಗುಪ್ತಚರ ಇಲಾಖೆ ಗಮನಿಸುತ್ತಿದ್ದು, ಸಂಕ್ರಾಂತಿ ಬಳಿಕ ದೊಡ್ಡ ಬದಲಾವಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.