ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು ಶೇ70 ಪ್ರತಿಶತದಷ್ಟು ಇದ್ದ ಪೌಷ್ಟಿಕತೆ ಈಗ ಶೇ 97 ಪ್ರತಿಶತದಷ್ಟಾಗಿದೆ. ಇದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿ ಹಾಗೇ ಹಾಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್‌ರನ್ನೂ ಪ್ರಧಾನಿ ಶ್ಲಾಘಿಸಿದರು. ಜಿಲ್ಲೆಯು ಅಪೌಷ್ಟಿಕತೆ ವಿಚಾರದಲ್ಲಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, 5 ವರ್ಷದ ಒಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಈಗಲೂ ಸಾವನ್ನಪ್ಪುತ್ತಿದ್ದಾರೆ. … Read more

ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ಭರ್ಜರಿ ಶುಭ ಸುದ್ದಿ

ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ ಏರಿಕೆಯ ನಿರ್ಧಾರ ಇಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹಾಲು, ನೀರು, ವಿದ್ಯುತ್ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾಪ ಬಂದಿದೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪ ಬರುವುದು ಸಹಜ. ಆದರೆ ದರ ಏರಿಕೆ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ ಎಂದರು. ಅವಸರದ … Read more

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಕುರಿತು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ..!

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆ ಮತ್ತೆ ಭರ್ಜರಿ ಏರಿಕೆಯಾಗಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ … Read more

ಜನ್ಮದಿನವೇ ಸಾವಿನ ದಿನವಾಯ್ತು!

ಬೆಂಗಳೂರು: ಈಕೆಯ ಪಾಲಿಗಂತೂ ಜನ್ಮದಿನವೇ ಸಾವಿನ ದಿನವಾಗಿದೆ. ಇಂಥದ್ದೊಂದು ದುರಂತ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಮನೆಯವರು ಬೇಡ ಎಂದರೂ ಕೇಳದೆ ಹೋಗಿದ್ದವಳು ಸಾವಿಗೀಡಾದಂಥ ಪ್ರಕರಣವೊಂದು ನಡೆದುಹೋಗಿದೆ.ಮಹಶ್ರೀ ಸಾವಿಗೀಡಾದ ಯುವತಿ. ಈಕೆ ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಜತೆಗೆ ಪಾರ್ಟ್​​ಟೈಮ್ ಆಗಿ ಟೆಕ್ಸ್​ಟೈಲ್ಸ್​ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಇವತ್ತು ಜನ್ಮದಿನದ ಖುಷಿಯಲ್ಲಿ ಈಕೆ ಹೊರಗೆ ಹೋಗಿದ್ದು, ಮನೆಯವರ ಪಾಲಿಗಂತೂ ಅದು ಶೋಕದ ದಿನವಾಗಿ ಪರಿಣಮಿಸಿದೆ. ‘ಇವತ್ತು ಜನ್ಮದಿನವಾದ್ದರಿಂದ ಕೆಲಸಕ್ಕೆ ಹೋಗಬೇಡ, ಮನೆಯಲ್ಲೇ ಇರು..’ ಎಂದು ಪಾಲಕರು … Read more

ಉಪ್ಪಿನಂಗಡಿಯ ಬದ್ರುನ್ನಿಶಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಆಯ್ಕೆ

ಕರಾವಳಿಯ ಹೆಣ್ಣು ಮಗಳು ಬದ್ರುನ್ನಿಶಾ ಪಿಎಸ್ ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 39ನೇ ಸ್ಥಾನವನ್ನು ಪಡೆದುಕೊಂಡಿದ್ದು ಕರಾವಳಿಗೆ ಕೀರ್ತಿಯನ್ನು ತಂದಿದ್ದಾರೆ. ಕೊಂತೂರು ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ದಂಪತಿಯ ಪುತ್ರಿಯಾದ ಬದ್ರುನ್ನಿಶಾ ಪ್ರಾಥಮಿಕ ಶಿಕ್ಷಣವನ್ನು ಕುಂತೂರಿನಲ್ಲಿ ಪಡೆದಿದ್ದು, ಅಗ್ರಿಕಲ್ಚರಲ್ ಸೈನ್ಸಸ್ ವಿಭಾಗದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರಿನಲ್ಲಿ ಬಿಎಸ್ಸಿ ಕೃಷಿ ಪದವಿಯನ್ನು ಪಡೆದಿರುತ್ತಾರೆ. ಇಸ್ಮಾಯಿಲ್ ಝುಬೈದ ದಂಪತಿಯ ನಾಲ್ವರು ಪುತ್ರಿಯರ ಪೈಕಿ ಕೊನೆಯವಳಾದ ಬದ್ರುನ್ನಿಶಾ ಇದೀಗ ಪಿಎಸ್ಐ ಆಗಿ ಆಯ್ಕೆಯಾಗಿದ್ದು, ಅವರ ಇನ್ನುಳಿದ ಮೂವರು … Read more

ಕಾಲೇಜಿನಲ್ಲೇ ಹೊಡೆದಾಡಿಕೊಂಡ ಫ್ರಿನ್ಸಿಪಲ್ ಮತ್ತು ಪ್ರಾಧ್ಯಪಕ

ಭೋಪಾಲ್: ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲ ಚೇಂಬರ್ ನಲ್ಲಿ ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ಭೋಪಾಲ್‌ ಜಿಲ್ಲೆಯ ಉಜ್ಜಯಿನಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲ ಶೇಖರ್‌ ಮೆದಾಮ್ವರ್‌ ಅವರೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಹಾಯಕ ಪ್ರಾಧ್ಯಾಪಕ ಬ್ರಹ್ಮದೀಪ್‌ ಅಲುನೆ ಮತ್ತು ಪ್ರಾಂಶುಪಾಲರು ಹೊಡೆದಾಡಿದ್ದಾರೆ. ಅವರಿಬ್ಬರು ಹೊಡೆದಾಡಿಕೊಳ್ಳುತ್ತಿರುವುದನ್ನು ಕಂಡು ಸಹೋದ್ಯೋಗಿಗಳು ಓಡಿ ಬಂದು ಜಗಳ ಬಿಡಿಸಿದ್ದಾರೆ. ಪ್ರಾಂಶುಪಾಲರಿಗೆ ಹೊಡೆದ ಆರೋಪದಲ್ಲಿ ಇದೀಗ ಪ್ರಾಧ್ಯಾಪಕ ಬ್ರಹ್ಮದೀಪ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ವೈರಲ್‌ ಆಗಿದೆ.

PSI ಹುದ್ದೆಗೆ ಆಯ್ಕೆಯಾದ ಸಾಧಿಯ: ರಾಜ್ಯಕ್ಕೆ 62 ನೇ ರ್ಯಾಂಕ್

ಬನಹಟ್ಟಿ: ಬನಹಟ್ಟಿಯ ನಾಲ್ಕು ಜನರು ಈ ಬಾರಿ ಬರೆದ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅವರಲ್ಲಿ ಸಾಧಿಯಾ ಕೂಡ ಓರ್ವಳಾಗಿದ್ದಾಳೆ. ಸಾಧಿಯಾ ಗುರ್ಲ್ ಹೊಸೂರ ಬಿ.ಕಾಮ್ ಪದವಿಧರೆ. 2019ರಲ್ಲಿ ಬಿ.ಕಾಮ್ ಪದವಿಯನ್ನು ಮುಗಿಸಿದ ಸಾಧಿಯಾ ಬನಹಟ್ಟಿಯ ಮನೆಯಲ್ಲಿ ಕುಳಿತುಕೊಂಡು ಓದಿದ್ದರು. ಸಾಧಿಯಾ ತಂದೆ ಅಬೂಬಕರ್ ಕಾರ್ಯಕ್ರಮಗಳಲ್ಲಿ ಪೆಂಡಾಲ ಹಾಕುವ ಕೆಲಸವನ್ನು ಮಾಡುತ್ತಾರೆ. ಪಿಎಸ್ ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 62 ಸ್ಥಾನ ಪಡೆದುಕೊಂಡಿರುವ ಸಾಧಿಯಾ 22 ವಯಸ್ಸಿನಲ್ಲಿಯೇ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಮಗಳು ಸಾಧಿಯಾ ಪಿಎಸ್ ಐ ಪರೀಕ್ಷೆಯಲ್ಲಿ ಪಾಸ್ … Read more

ವಿಟ್ಲ: ಪ.ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ವಿಟ್ಲ: ಡೆತ್ ನೋಟು ಬರೆದಿಟ್ಟು ಪಟ್ಟಣ ಪಂಚಾಯತ್ ಸಿಬ್ಬಂದಿ ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು. ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ರಾಜೇಶ್ ಅವರ ಮೇಲೆ ಲಂಚದ ಅರೋಪ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೋವಿಡ್ ಭೀತಿ: ಮುಚ್ಚಲ್ಪಟ್ಟ ಶಾಲೆಗಳನ್ನು ತೆರೆಯಲು ಜ.21ರ ತಜ್ಞರ ಸಭೆಯಲ್ಲಿ ತೀರ್ಮಾನ; ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: `ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ದೃಢ ಪ್ರಮಾಣ ಹೆಚ್ಚಿರುವುದರಿಂದ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ಪುನರಾರಂಭಿಸುವ ಕುರಿತು ಶುಕ್ರವಾರ(ಜ.21) ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದಿಲ್ಲಿ ತಿಳಿಸಿದ್ದಾರೆ. ಬುಧವಾರ ಇಲ್ಲಿನ ಶಾಸಕರ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಕೋವಿಡ್ ಸೋಂಕು ಕೆಲ ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಶಾಲೆಗಳನ್ನು ಬಂದ್ ಮಾಡಲಾಗಿತ್ತು. … Read more