ಸಯ್ಯದ್ ಮೋದಿ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿ: ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಿಂಧು

ಲಕ್ನೋ: ಎರಡು ಬಾರಿ ಒಲಿಂಪಿಕ್ಸ್ ಪದಕ ಜಯಿಸಿರುವ ಪಿವಿ ಸಿಂದು ಯುವ ಸಹ ಆಟಗಾರ್ತಿ ಮಾಳವಿಕಾ ಬಾನ್ಸೋಡ್ ರನ್ನು ನೇರ ಗೇಮ್ಗಳ ಅಂತರದಿಂದ ಮಣಿಸುವ ಮೂಲಕ ಸಯ್ಯದ್ ಮೋದಿ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆದಿತ್ಯವಾರ ಕೇವಲ 35 ನಿಮಿಷಗಳಲ್ಲಿ ಅಂತ್ಯಗೊಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತೆ ಸಿಂಧು ಎದುರಾಳಿ ಮಾಳವಿಕಾ ರನ್ನು 21-13, 21-16 ಅಂತರದಿಂದ ಸುಲಭವಾಗಿ ಮಣಿಸಿದರು. ಮಾಜಿ ವಿಶ್ವ ಚಾಂಪಿಯನ್ ಸಿಂಧು ಎರಡನೇ ಬಾರಿ ಸಯ್ಯದ್ … Read more

ಬೈಲ್ ಬ್ರದರ್ಸ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ (ರಿ) ಕೆದಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ | ಸಮಿತಿಯ ಅಧ್ಯಕ್ಷರಾಗಿ ಹಾರಿಸ್ ಕೆದಂಬಾಡಿ, ಪ್ರ.ಕಾರ್ಯದರ್ಶಿಯಾಗಿ ಇಮ್ತಿಯಾಝ್ ಕೆದಂಬಾಡಿ, ಕೋಶಾಧಿಕಾರಿಯಾಗಿ ಸಾದಿಕ್ ಖತರ್ ಆಯ್ಕೆ

ಮಂಜೇಶ್ವರ: ಇಲ್ಲಿನ ಪ್ರತಿಷ್ಠಿತ ಬೈಲ್ ಬ್ರದರ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ (ರಿ) ಕೆದಂಬಾಡಿ ಇದರ ವಾರ್ಷಿಕ ಮಹಾಸಭೆಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಬೈಲ್ ಬ್ರದರ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಹಾರಿಸ್ ಕೆದುಂಬಾಡಿ ಅವರು ನೆರೆದವರನ್ನು ಸ್ವಾಗತಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿದ್ದೀಕ್ ಖತರ್ ಅವರು ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಯನ್ನು ನೆರವೇರಿಸಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಖಲೀಲ್ RST, ಅಧ್ಯಕ್ಷರಾಗಿ ಹಾರಿಸ್ ಕೆದಂಬಾಡಿ, ಉಪಾಧ್ಯಕ್ಷರಾಗಿ ಅನ್ಸಾರ್ ಖತರ್, ಪ್ರಧಾನ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಕೆದಂಬಾಡಿ ಗುಜರಾತ್, ಕಾರ್ಯದರ್ಶಿಯಾಗಿ … Read more

ಏಷ್ಯನ್ ಚಾಂಪಿಯನ್ ಹಾಕಿ ಟ್ರೋಫಿ: ಪಾಕ್ ಮಣಿಸಿ ಕಂಚು ಗೆದ್ದ ಭಾರತ

ನವದೆಹಲಿ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪುರುಷರ ಹಾಕಿ ಟೂರ್ನಮೆಂಟ್‍ನಲ್ಲಿ ಬುಧವಾರ ನಡೆದ ಮೂರನೇ-ನಾಲ್ಕನೇ ಸ್ಥಾನದ ಪ್ಲೇ-ಆಫ್ ಪಂದ್ಯದಲ್ಲಿ ಭಾರತವು ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಕಂಚಿನ ಪದಕವನ್ನು ಗಳಿಸಿದೆ. ಭಾರತವು 4-3 ರಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿದೆ

ಬಿಡಬ್ಲ್ಯೂಎಫ್ ಭಾರತಕ್ಕೆ ಪದಕ ಖಚಿತ

ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್‌ ನಲ್ಲಿ ಭಾರತದ ಕಿದಂಬಿ ಶ್ರೀಕಾಂತ್ ಹಾಗೂ ಲಕ್ಷ್ಯ ಸೇನ್ ಪದಕ ಗೆಲ್ಲೋದು ಖಚಿತವಾಗಿದೆ. ಕಿದಂಬಿ ಶ್ರೀಕಾಂತ್ ಮತ್ತು ಲಕ್ಷ್ಯ ಸೇನ್ ಪಂದ್ಯಾವಳಿಯಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದು, ಈ ಮೂಲಕ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಭಾರತಕ್ಕೆ ಪದಕಗಳು ಖಚಿತವಾಗಿವೆ. ನಾಳೆ ನಡೆಯಲಿರುವ ಮೊದಲ ಸೆಮಿಫೈನಲ್‌ನಲ್ಲಿ ಶ್ರೀಕಾಂತ್ ಮತ್ತು ಸೇನ್ ಮುಖಾಮುಖಿಯಾಗುವುದರಿಂದ ಭಾರತಕ್ಕೆ ಕನಿಷ್ಠ ಬೆಳ್ಳಿ ಪದಕ ಖಚಿತವಾಗಿದೆ. ಶ್ರೀಕಾಂತ್ ಕೇವಲ 26 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ 21-8 21-7ರಿಂದ ನೆದರ್ಲೆಂಡ್ಸ್‌ನ ಮಾರ್ಕ್ ಕ್ಯಾಲ್ಜೋವ್ ಅವರನ್ನು … Read more

ಗೊಂದಲಗಳಿಗೆ ಫುಲ್ ಸ್ಟಾಫ್ ಕೊಟ್ಟ ಕೊಹ್ಲಿ

  ಮುಂಬೈ: ನನ್ನ ಮತ್ತು ರೋಹಿತ್ ಶರ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ದಕ್ಷಿಣ ಆಫ್ರಿಕಾದೊಂದಿಗೆ ಏಕದಿನ ಸರಣಿ ಆಡಲು ನಾನು ಸಿದ್ಧನಿದ್ದೇನೆ ಎಂದು ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.  ದಕ್ಷಿಣ ಆಫ್ರಿಕಾ ಪ್ರವಾಸದ ಮೊದಲು ವಿರಾಟ್ ಕೊಹ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ಪಷ್ಟನೆ ನೀಡಿದ್ದಾರೆ. ಏಕದಿನ ಸರಣಿ ಆಡಲು ನಾನು ಸಿದ್ಧ, ನಾನು ಬಿಸಿಸಿಐನಿಂದ ವಿಶ್ರಾಂತಿ ನೀಡಲು ಇದುವರೆಗೂ ಮನವಿ ಮಾಡಿಲ್ಲ, ನನಗೆ ವಿಶ್ರಾಂತಿಯ ಅಗತ್ಯವಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.  ಏಕದಿನ ಸರಣಿಗೆ ಹೊಸ … Read more

‘ಮೋದಿ ಮೋದಿ’ ಎಂದರೆ ಬಡವರ ಬದುಕು ಬೂದಿಯಾಗುವುದು ಖಚಿತ : ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ, ಪ್ರಧಾನಿ ನರೇಂದ್ರ ಮೋದಿಯವರಾಗಲಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ಸರ್ಕಾರ ಕೇಳುತ್ತಿಲ್ಲ. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ. … Read more

ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ : ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳು ಪೋಷಕರಿಗೆ ಫೀಸು ಕುರಿತು ಕಿರುಕುಳ ನೀಡುವ ಪ್ರಕರಣಗಳು ಕೇಳಿಬರುತ್ತಿವೆ. ಹೀಗಾಗಿ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂಬುದಾಗಿ ಹೇಳಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ಸಲ್ಲಿಕೆಯಾದರೆ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯಾವುದೇ ಶಾಲೆಗಳು ವಿದ್ಯಾರ್ಥಿಗಳು … Read more

ಪೆಟ್ರೋಲ್ 100 – ನಾಟ್ ಔಟ್’ : ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ದೇಶದಲ್ಲಿ ಇಂಧನ ದರ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಹಾಕುತ್ತಿರುವ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ವಿರೋಧಿ … Read more

ಲೂಡೋ ನಿಷೇಧಿಸಬೇಕೆಂದು ನ್ಯಾಯಾಲಯದಲ್ಲಿ ಅರ್ಜಿ | ಅದೊಂದು ಜೂಜಾಟವೆಂಬ ಆರೋಪ

ನವದೆಹಲಿ: ಪ್ರಸಿದ್ಧ ಆಟವಾಗಿರುವ ಲೂಡೋ ಗೇಮನ್ನು ನಿಷೇಧಿಸಬೇಕೆಂದು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಸದಸ್ಯನಾಗಿರುವ ಕೇಶವ್ ಮೂಲೆ ಎಂಬಾತನೇ ನ್ಯಾಯಾಲಯದ ಮೆಟ್ಟಿಲೇರಿದ ವ್ಯಕ್ತಿ. ಈತ ಬಾಂಬೆ ಹೈಕೋರ್ಟಿನ ಕದ ತಟ್ಟಿರುತ್ತಾನೆ. ಲೂಡೋ ಒಂದು ಜೂಜಾಟವಾಗಿದೆ. ಅದು ನೈಪುಣ್ಯ ಅಥವಾ ಸಾಮಾರ್ಥ್ಯದಿಂದ ಗೆಲುವು ಸಾಧಿಸುವ ಆಟವಲ್ಲ. ಬದಲು ಅದೃಷ್ಠದಿಂದ ಗೆಲುವು ಪಡೆಯುವ ಆಟ. ಹಾಗಾಗಿ ಲೂಡೋ ಗೇಮನ್ನು ಅದೃಷ್ಠದಿಂದ ಗೆಲ್ಲುವ ಆಟ ಎಂಬದಾಗಿ ಘೋಷಣೆ ಮಾಡಬೇಕೆಂದು ಕೇಶವ್ ಮೂಲೆ ತನ್ನ ಅರ್ಜಿಯಲ್ಲಿ ಆಗ್ರಹಿಸಿದ್ದಾನೆ. ಲೂಡೋ ಸುಪ್ರೀಮ್ ಆ್ಯಪ್ ಎಂಬ … Read more

ಇಂದು ವಿಶ್ವ ಸೈಕಲ್ ದಿನ | ಸೈಕಲ್ ಸವಾರಿಯ ಪ್ರಯೋಜನಗಳೇನು?

ಹಲವು ವಿಶೇಷ ದಿನಗಳಿರುವಂತೆ ಸೈಕಲ್ ಸವಾರಿಗೂ ಒಂದು ದಿನವಿದೆ. ಸೈಕಲ್ ಬಳಸುವುದನ್ನು ಪ್ರೋತ್ಸಾಹಿಸುವ ಸಲುವಾಗಿ ವಿಶ್ವ ಸಂಸ್ಥೆಯು 2018 ರ ಎಪ್ರಿಲ್ ತಿಂಗಳಿನಂದು ‘ಜೂನ್ ಮೂರು‘ಅನ್ನು ವಿಶ್ವ ಸೈಕಲ್ ದಿನವನ್ನಾಗಿ ಘೋಷಿಸಿಕೊಂಡಿತು. ಮೊದಲೆಲ್ಲಾ ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು ದೂರದ ಊರುಗಳಿಗೆ ಸೈಕಲ್ ಬಳಸಿಯೇ ಹೋಗುತ್ತಿದ್ದರು. ವಾಹನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾದ ನಂತರ ಸೈಕಲ್ ಮೇಲಿನ ಅವಲಂಬನೆಯು ಕುಂಠಿತವಾಗುತ್ತಾ ಬಂತು. ಅದೇ ವೇಳೆ ವಿನೋದ ಸಂಚಾರಿಗಳು ಸೈಕಲ್ ಸವಾರಿಯನ್ನು ಸವಾಲಾಗಿ ತೆಗೆದು ದೂರದ ಊರುಗಳಿಗೆ ಪ್ರಯಾಣ ಬೆಳೆಸಿ, ವಿಶಿಷ್ಠ ಅನುಭವ … Read more