ರಾಜ್ಯದಲ್ಲಿ ಇಂದು 42,470 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 19.33%

ರಾಜ್ಯದಲ್ಲಿ ಇಂದು ಹೊಸದಾಗಿ 42,470 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು 26 ಮಂದಿ ಬಲಿಯಾಗಿದ್ದಾರೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 17,266 ಸೇರಿದಂತೆ ರಾಜ್ಯಾಧ್ಯಂತ 42,470 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿಸಿದ್ದಾರೆ. ಪಾಸಿಟಿವಿಟಿ ದರ 19.33%ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 35,140 ಜನರು ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಎಸ್‌ ಎಸ್‌ ಎಲ್ ಸಿ ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ. ಕಳೆದ … Read more

ರಾಜ್ಯಾಧ್ಯಂತ ‘ವೀಕೆಂಡ್ ಕರ್ಪ್ಯೂ’ ರದ್ದು, ನೈಟ್ ಕರ್ಪ್ಯೂ ಮುಂದುವರಿಕೆ: ಸಚಿವ ಆರ್ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂವನ್ನು ರದ್ಧುಗೊಳಿಸಲಾಗುತ್ತಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತೆ ಮುಂದುವರೆಸಲಾಗುತ್ತದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆಯ ಆಧಾರದ ಮೇಲೆ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಇಂದು ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ತಿಳಿಸಿದಂತ ಅವರು, ಮುಖ್ಯಮಂತ್ರಿ ಬೊಮ್ಮಾಯಿಯವರ ನೇತೃತ್ವದಲ್ಲಿ 2 ಗಂಟೆಗೂ ಅಧಿಕ ಸಮಯದ ಕೋವಿಡ್ ನಿಯಂತ್ರಣ ಸಭೆಯನ್ನು ನಡೆಸಲಾಗಿಯಿತು. ಎಲ್ಲಾ ತಜ್ಞರ ಅಭಿಪ್ರಾಯವನ್ನು … Read more

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಮೃತ್ಯು ಪ್ರಕರಣ; ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ … Read more

ದುಬೈಯಿಂದ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್‌-ವೇನಲ್ಲಿ: ಕೂದಲೆಳೆ ಅಂತರದಿಂದ ತಪ್ಪಿದ ದುರಂತ

 ದುಬೈಯಿಂದ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್‌-ವೇನಲ್ಲಿ: ಕೂದಲೆಳೆ ಅಂತರದಿಂದ ತಪ್ಪಿದ ದುರಂತ ಹೊಸದಿಲ್ಲಿ: ದುಬೈ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್-ವೇಯಲ್ಲಿದ್ದುದರಿಂದ ಟೇಕ್-ಆಫ್ ವೇಳೆ ಯಾವುದೇ ದೊಡ್ಡ ಅವಘಡ ನಡೆಯದೆ ನೂರಾರು ಜೀವಗಳು ಉಳಿದಿವೆ ಎಂದು ತಿಳಿದು ಬಂದಿದೆ. ದುಬೈಯಿಂದ ಹೈದರಾಬಾದ್‌ಗೆ ಒಂದು ಎಮಿರೇಟ್ಸ್ ವಿಮಾನ ರವಿವಾರ ರಾತ್ರಿ 9.45ಕ್ಕೆ ನಿರ್ಗಮಿಸಲಿದ್ದರೆ, ಬೆಂಗಳೂರಿಗೆ ಹೊರಟಿದ್ದ ಒಂದು ವಿಮಾನ ಕೂಡ ಸರಿಸುಮಾರು ಅದೇ ಸಮಯಕ್ಕೆ ಹಾರಾಟ ನಡೆಸಲು ಸಿದ್ಧವಾಗಿತ್ತು. ಐದು ನಿಮಿಷಗಳ … Read more

ಮತ್ತೊಮ್ಮೆ ಶೀರಾಡಿ ಘಾಟ್ ರಸ್ತೆ ಬಂದ್

ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ರಾಷ್ಟ್ರಿಯ ಹೆದ್ದಾರಿ-75 ನ್ನು ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಡಾಳಿತ ತೀರ್ಮಾನಿಸಿದೆ. ಮಂಗಳೂರು ಮತ್ತು ಬೆಂಗಳೂರು ನಡುವಿನ ಸಂಚಾರ ಸ್ಥಗಿತಗೊಳ್ಳುವುದರ ಜೊತೆಗೆ ಆ ಭಾಗದ ಪ್ರಸಿದ್ದ ಯಾತ್ರಾ ಸ್ಥಳವಾದ ಧರ್ಮಸ್ಥಳಕ್ಕೆ ಹೋಗುವ ಭಕ್ತಾದಿಗಳಿಗೆ ಸಮಸ್ಯೆಯಾಗಲಿದೆ. ಚತುಷ್ಪತ ರಸ್ತೆಯ ನಿರ್ಮಾಣ ಕಾಮಗಾರಿಯ ಸಲುವಾಗಿ ಆರು ತಿಂಗಳ ಕಾಲ ರಸ್ತೆ ಬಂದ್ ಮಾಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಮೇಕೆದಾಟು ಪಾದಯಾತ್ರೆ ಸ್ಥಗಿತಗೊಳಿಸಿದ ಕಾಂಗ್ರೆಸ್

ಮೇಕೆದಾಟು ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಹೈಕೋರ್ಟ್ ಆದೇಶ, ಬಿಜೆಪಿ ಒತ್ತಡ, ಪೊಲೀಸ್ ಪ್ರಕರಣ ಈ ಎಲ್ಲಾ ಒತ್ತಡದ ಹಿನ್ನೆಲಯಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ. ರಾಮನಗರ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ.

ಕೊರೋನ ನಿಯಂತ್ರಣ ಹಿನ್ನೆಲೆ:ಜನವರಿ 31ರ ವರೆಗೆ ನಿರ್ಬಂಧ ಮುಂದುವರಿಕೆ; ಸಿ.ಎಂ. ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಇಲಾಖೆ ನೀಡುತ್ತಿರುವ ಕೊರೋನಾ ವರದಿ ಪ್ರಕಾರ ಕೋವಿಡ್ ಪಾಸಿಟಿವ್ ದರ ಹೆಚ್ಚಾಗುತ್ತಿದ್ದು ಜನವರಿ 31ರ ವರೆಗೆ ಹೆಚ್ಚುವರಿ ನಿಯಂತ್ರಣ ಜಾರಿಗೊಳಿಸಿದೆ. ಈ ಬಗ್ಗೆ ಮೀಟಿಂಗ್ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,ಸರ್ಕಾರದ ನಿರ್ಧಾರದ ಪ್ರಕಾರ ಜನವರಿ 31ರ ವರೆಗೆ ಎಲ್ಲಾ ಪ್ರತಿಭಟನೆ ಹಾಗೂ ರ್ಯಾಲಿ ಗಳನ್ನು ನಿಷೇಧಿಸಲಾಗಿದೆ. ಹಾಗೂ ಶಾಲೆಗಳನ್ನು ಮುಚ್ಚುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಮದುವೆ ಸಮಾರಂಭಗಳು ತರೆದ ಸ್ಥಳದಲ್ಲಾದರೆ 200 ಮಂದಿ ಹಾಗೂ ಒಳಾಂಗಣದಲ್ಲಾದರೆ 100 ಮಂದಿಗೆ ಸೇರಲು ಅವಕಾಶ … Read more

ಸಚಿವ ಸೋಮಶೇಖರ್ ಪುತ್ರನ ಬ್ಲ್ಯಾಕ್ ಮೇಲ್ ಪ್ರಕರಣ: ಸಿಸಿಬಿ ಯಿಂದ ಭಾರೀ ವಿಚಾರಣೆ.

ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್ ಸಂಬಂಧ ಬಂಧನಕ್ಕೆ ಒಳಗಾಗಿರುವ ರಾಹುಲ್ ಭಟ್‍ನ ವಿಚಾರಣೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಇದುವರೆಗೂ ಎಂಟು ಮಂದಿಯ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ. ಸಚಿವ ಎಸ್.ಟಿ.ಸೋಮಶೇಖರ್, ಪುತ್ರ ನಿಶಾಂತ್, ಆಪ್ತ ಕಾರ್ಯದರ್ಶಿಗಳಾದ ಭಾನುಪ್ರಕಾಶ್, ಶ್ರೀನಿವಾಸ್ ಗೌಡ, ಇಂಡಿ ಶಾಸಕ ಯಶವಂತರಾಯ್ ಪಾಟೀಲ್ ಮತ್ತು ಅವರ ಪುತ್ರಿ, ಆರೋಪಿ ರಾಹುಲ್ ಭಟ್‍ಗೆ ಸಿಮ್ ಕೊಟ್ಟಿದ್ದ ಎನ್ನಲಾಗಿರುವ ಮುಂಬೈನ ರಾಕೇಶ್ ಹೇಳಿಕೆ ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಬಂಧನಕ್ಕೊಳಗಾಗಿರುವ ಆರೋಪಿ ರಾಹುಲ್ ಭಟ್‍ನನ್ನು … Read more

ಬೆಂಗಳೂರು: ಒಂದೇ ದಿನದಲ್ಲಿ 67 ವಿದ್ಯಾರ್ಥಿಗಳಿಗೆ ಸೋಂಕು.

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 67 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಗಳೂರಿನ ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳು ಹಾಗೂ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿವಿಯ 7 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸುರತ್ಕಲ್ ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳನ್ನು ಸಂಸ್ಥೆಯ ಗೆಸ್ಟ್ ಹೌಸ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.