ಅಕ್ಟೋಬರ್ 25 ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೋವಿಡ್ ಕಾರಣದಿಂದ ದೀರ್ಘ ಅವಧಿಯಿಂದ ಬಂದ್ ಆದ ಕಿರಿಯ ಪ್ರಾಥಮಿಕ ಶಾಲೆಗಳ ಪುನಾರಂಭಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ಶಾಲಾ ತರಗತಿಗಳನ್ನು (1ರಿಂದ 5) ಇದೇ ಅಕ್ಟೋಬರ್ 25 ರಿಂದ ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಪ್ರಾಥಮಿಕ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ತರಗತಿಯಲ್ಲಿ ಶೇ.50ರಷ್ಟು ಮಕ್ಕಳಿಗೆ … Read more

ನಿಮ್ಮ ತಂದೆಯಿಂದ ಏನಾದರೂ ಕಲಿತಿದ್ದರೆ, ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದೊಂದಿಗೆ ಹೇಗೆ ಸೇರಿಕೊಳ್ಳುತ್ತಿದ್ದೀರಿ? : ಬೊಮ್ಮಾಯಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು.ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ? ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ನೈತಿಕ ಪೋಲಿಸ್ ಗಿರಿ ಕುರಿತು ಸಿದ್ದರಾಮಯ್ಯ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯೆ ಶುರುವಾದ ಟ್ವಿಟ್ಟರ್ ವಾಗ್ವಾದ ಮತ್ತೆ ಮುಂದುವರಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಡೆದ ಹಿಂದೂ ಸಂಘಟನೆಯ ನಾಯಕರ ಹತ್ಯೆ, ಟಿಪ್ಪು ಜಯಂತಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದರು. “ನಾನು ನಿಮ್ಮಿಂದ ಆಡಳಿತ ಮತ್ತು ಪೊಲೀಸಿಂಗ್ ಬಗ್ಗೆ ತಿಳಿಯಬೇಕಿಲ್ಲ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ. ಇಂತಹ ಬೇಜವಾಬ್ದಾರಿ ಹೇಳಿಕೆಗಿಂತ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು. ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು. ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

ನೀವು ಗೃಹಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ, ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿ ಕೊಡುತ್ತೇನೆ. ತನಿಖೆ ಮಾಡಿ ಜನರಿಗೆ ಸತ್ಯ ತಿಳಿಸಿ. 2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು ಎಂದಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ. ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ? ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.

ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷಿಸಿ.

ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ.
ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್. ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ
ನ್ಯಾಯ ಕೊಡಿಸಿ ಎಂದು ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ ಎಂದು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ ಗೋಳನ್ನು ಶೇರ್ ಮಾಡಿ ಟಾಂಗ್ ನೀಡಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜ್ವರದ ನಂತರ ನಿಶ್ಯಕ್ತಿ ದೌರ್ಬಲ್ಯದ ಕಾಣಿಸಿಕೊಂಡ ಕಾರಣ ಬುಧವಾರ ಸಂಜೆ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 89 ವರ್ಷ ವಯಸ್ಸಿನವರಾದ ಮನಮೋಹನ್ ಸಿಂಗ್ ಅವರಿಗೆ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಅದರಿಂದ ಚೇತರಿಸಿಕೊಂಡಿದರೂ ದೇಹದಲ್ಲಿ ವಿಕ್ನೇಸ್ ಆದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಿಸಲಿಸಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕಳೆದ … Read more

ಯುಪಿ ಹಿಂಸಾಚಾರ : ರೈತರ ಹತ್ಯೆ ಖಂಡಿಸಿ ಇಂದು ಮಾಹಾರಾಷ್ಟ್ರ ಬಂದ್ !

ಮುಂಬೈ: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲಿನ ಹಿಂಸಾಚಾರವನ್ನು ಖಂಡಿಸಿ ಮಹಾರಾಷ್ಟ್ರದ ಮಹಾ ವಿಕಾಸ್ ಅಗಾಡಿ (MVA) ಮೈತಿ ಒಕ್ಕೂಟದಿಂದ ಸೋಮವಾರ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಅಂಗಡಿ ಮುಂಗಟ್ಟುಗಳು ಸೇರಿದಂತೆ ಬಹುತೇಕ ಎಲ್ಲವೂ ಸ್ವಯಂಪ್ರೇರಿತವಾಗಿ ಬಂದ್ ಆಗಲಿವೆ.

ಪ್ರತಿಭಟನಾ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಅವರು ಕಾರ ಹರಿಸಿದ ಪರಿಣಾಮ ನಾಲ್ವರು ರೈತರು ಸೇರಿದಂತೆ 8 ಜನರ ಸಾವಿಗೆ ಕಾರಣವಾದ ಯುಪಿ ಸರ್ಕಾರದ ನಡೆಯನ್ನು ಖಂಡಿಸಿ ಮಹಾರಾಷ್ಟ್ರ ಸರ್ಕಾರ ಬಂದ್ ಗೆ ಕರೆ ನೀಡಿದೆ.

ಮಹಾರಾಷ್ಟ್ರದ ಶಿವಸೇನೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಅಥವಾ ಎನ್‌ಸಿಪಿ ಪಕ್ಷಗಳನ್ನು ಒಳಗೊಂಡ ಮಹಾರಾಷ್ಟ್ರ ವಿಕಾಸ್ ಅಗಾಡಿ (MVA) ಸರ್ಕಾರ ಬಂದ್‌ಗೆ ಬೆಂಬಲ ನೀಡುತ್ತಿದೆ. ರಾಜ್ಯ ಸರ್ಕಾರದ ಮೂರು ಪಕ್ಷಗಳು ಸೇರಿ ಬಂದ್ ಘೋಷಿಸಿದ ಬಂದ್ ಯಶಸ್ವಿಯಾಗಿ ನಡೆಯುತ್ತಿದೆ.

“ರೈತರನ್ನು ಬೆಂಬಲಿಸುವಂತೆ ನಾನು ಮಹಾರಾಷ್ಟ್ರದ 12 ಕೋಟಿ ಜನರನ್ನು ವಿನಂತಿಸುತ್ತೇನೆ. ಬೆಂಬಲ ಎಂದರೆ ನೀವೆಲ್ಲರೂ ಬಂದ್‌ಗೆ ಕೈಜೋಡಿಸಿ ಮತ್ತು ಒಂದು ದಿನದ ಮಟ್ಟಿಗೆ ನಿಮ್ಮ ಕೆಲಸವನ್ನು ನಿಲ್ಲಿಸಿ” ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿದ್ದರು.

ಅಗತ್ಯ ಸೇವೆಗಳಿಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ, ಅದರ ಹೊರತಾಗಿ ಎಲ್ಲ ಅಂಗಡಿ ಮುಂಗಟ್ಟು ಮತ್ತು ಸೇವೆಗಳನ್ನು ಬಂದ್ ಮಾಡಲಾಗುವುದು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಥವಾ ದಿನಸಿ ಮಾರುಕಟ್ಟೆಯನ್ನೂ ಕೂಡ ಮುಚ್ಚಲಾಗುವುದು ಎಂದು ರಾಜ್ಯ ಸರ್ಕಾರವೇ ಹೇಳಿದೆ.

“ಕೊರೊನಾ ವೈರಸ್‌ ಸೋಂಕು ಕಾರಣದಿಂದಾಗಿ ಲಾಕ್‌ಡೌನ್‌ ಮಾಡಿದ ಹಿನ್ನೆಲೆಯಿಂದ ಈಗಾಗಲೇ ನಮ್ಮ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ಈ ಕಾರಣದಿಂದಾಗಿ ನಾವು ಈಗ ಬಂದ್‌ಗೆ ಬೆಂಬಲ ನೀಡುವುದಿಲ್ಲ” ಎಂದು ಮಹಾರಾಷ್ಟ್ರ ವ್ಯಾಪಾರಿಗಳ ಸಂಘವು ಬಂದ್ ಗೆ ವಿರೋಧ ವ್ಯಕ್ತಪಡಿಸಿದೆ.

ಲಖಿಂಪುರ ಹಿಂಸಾಚಾರ : ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಬಂಧನ !

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ವಿಶೇಷ ತನಿಖಾ (ಎಸ್ ಐಟಿ) ತಂಡ ಶನಿವಾರ ತಡರಾತ್ರಿ ಬಂಧಿಸಿದೆ.

ಲಖಿಂಪುರ ಖೇರಿ ಘಟನೆಯಲ್ಲಿ ತಮ್ಮ ಪಾತ್ರ​ವಿಲ್ಲ ಎಂದು ಕೆಲ​ವು ದಾಖ​ಲೆ​ಗಳೊಂದಿಗೆ ಅವರು 12 ತಾಸಿನ ವಿಚಾ​ರಣೆ ವೇಳೆ ಸ್ಪಷ್ಟನೆ ನೀಡಲು ಯತ್ನಿ​ಸಿ​ದ​ರು. ಆದರೆ ಪೊಲೀ​ಸರ ಕೇಳಿದ ಕೆಲವು ಪ್ರಶ್ನೆಗಳಿಗೆ​ಗೆ ಉತ್ತರ ನೀಡಲು ವಿಫ​ಲರಾಗಿ ಅಸ​ಹ​ಕಾರ ತೋರಿದ​ರು.  ಹೀಗಾಗಿ ಅವರನ್ನು ಬಂಧಿ​ಸ​ಲಾ​ಯಿತು. ಅವ​ರನ್ನು ಕೋರ್ಟ್‌ಗೆ ಹಾಜ​ರು​ಪ​ಡಿ​ಸಿ ಮತ್ತೆ ವಶಕ್ಕೆ ಪಡೆದು ಹೆಚ್ಚಿನ ವಿಚಾ​ರಣೆ ನಡೆ​ಸು​ತ್ತೇ​ವೆ ಎಂದು ಡಿಐಜಿ ಉಪೇಂದ್ರ ಅಗರವಾಲ್ ತಿಳಿಸಿದ್ದಾರೆ.

ಲಖಿಂಪುರ ಖೇರಿಯಲ್ಲಿ ರಸ್ತೆ ಮೇಲೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿದ ಪರಿಣಾಮ ನಾಲ್ವರು ರೈತರು ಸೇರಿದಂತೆ 8 ಜನರ ಸಾವಿಗೆ ಕಾರಣವಾದ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಬಂಧಿಸಬೇಕು ಎಂದು ರೈತ ಸಂಘಟನೆಗಳು ಯುಪಿ ಸರ್ಕಾರವನ್ನು ಒತ್ತಾಯಿಸಿದವು.

ಕೃತ್ಯ ನಡೆದ 6 ದಿನಗಳ ಬಳಿಕ ಆಶಿಶ್‌ ಮಿಶ್ರಾ ಅವರನ್ನು ಬಂಧಿಸಲಾಗಿದೆ. ಅಕ್ಟೋಬರ್‌ 8ಕ್ಕೆ ಆಶಿಶ್‌ ಮಿಶ್ರಾಗೆ ಎಸ್‌ಐಟಿ ಮುಂದೆ ಹಾಜರಾಗಲು ಸಮನ್ಸ್‌ ನೀಡಲಾಗಿತ್ತು. ಗೈರಾದ ಕಾರಣ 2ನೇ ಸಮನ್ಸ್‌ ಜಾರಿ ಮಾಡಲಾಗಿತ್ತು. ಲಖಿಂಪುರದ ಅಪರಾಧ ವಿಭಾಗದ ಕಚೇರಿಗೆ ಅಕ್ಟೋಬರ್‌ 9 ರಂದು ಬೆಳಗ್ಗೆ ಆಶಿಶ್‌ ಮಿಶ್ರಾ ಹಾಜರಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್‌ 7ರಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಶ್‌ ಮಿಶ್ರಾ ಸೇರಿ ಇದುವರೆಗೆ 3 ಮಂದಿಯನ್ನು ಬಂಧಿಸಲಾಗಿದೆ. ಆಶಿಶ್ ಮಿಶ್ರಾ ಬಂಧನ ಆಗಲೇಬೇಕು ಎಂದು ಪಟ್ಟು ಹಿಡಿದಿದ್ದ ರೈತ ಸಂಘಟನೆಗಳು ಹಾಗೂ ವಿಪಕ್ಷಗಳ ಬೇಡಿಕೆ ಈಡೇರಿದಂತಾಗಿದೆ.

ಅಟೋ ರಿಕ್ಷಾ ಚಾಲಕ ಯಾ ಪ್ರಯಾಣಿಕರ ಪಾಲಿಗೊಂದು ಶುಭ ಸುದ್ದಿ | ಕೋವಿಡ್ ಸಮಯದಲ್ಲಿ ಅಟೋ ರಿಕ್ಷಾನೇ ಹೆಚ್ಚು ಸುರಕ್ಷಿತವೆಂದು ಅಧ್ಯಯನ ವರದಿ

ನವದೆಹಲಿ: ಕೋವಿಡ್ ಕಾರಣದಿಂದಾಗಿ ಅತಿ ಹೆಚ್ಚು ನಷ್ಟಕ್ಕೊಳಗಾದ ಕ್ಷೇತ್ರಗಳಲ್ಲಿ ಸಾರಿಗೆ–ಸಂಪರ್ಕವೂ ಒಂದು. ಕಾರು, ಬಸ್ಸು, ರಿಕ್ಷಾ ಮುಂತಾದ ವಾಹನಗಳಿಂದಲೇ ಜೀವನೋಪಾಯ ಮಾಡುತ್ತಿರುವವರಿಗೆ ಇದು ಮರ್ಮಾಘಾತ ನೀಡಿರುವುದು ಸುಳ್ಳಲ್ಲ. ಇದೀಗ ಅಟೋ ರಿಕ್ಷಾ ಚಾಲಕ ಮತ್ತು ಪ್ರಯಾಣಿಕರ ಪಾಲಿಗೆ ಶುಭ ಸುದ್ದಿಯೊಂದು ಬಂದಿದೆ. ಹೌದು.. ಕೋವಿಡ್ ಕಾಲದಲ್ಲಿ ಅಟೋ ರಿಕ್ಷಾ ಪ್ರಯಾಣವೇ ಅತ್ಯಂತ ಸುರಕ್ಷಿತ ಪ್ರಯಾಣ ಎಂಬುದನ್ನು ಅಧ್ಯಯನವು ತೋರಿಸಿಕೊಟ್ಟಿದೆ. ಅಮೇರಿಕಾದ ಮೇರಿಲ್ಯಾಂಡ್ ನಲ್ಲಿರುವ ಜೋನ್ಸ್ ಹೋಪ್ಕಿನ್ಸ್ ವಿಶ್ವವಿದ್ಯಾಲಯ (ಜೆಎಚ್‍ಯು) ದ ಅಧ್ಯಯನ ವರದಿಯಲ್ಲಿ ಈ ಅಂಶವು ಬೆಳಕಿಗೆ ಬಂದಿದೆ. ಎಸಿ (ಹವಾ ನಿಯಂತ್ರಕ) … Read more

ಯುಎಇ: ಇಂದಿನಿಂದ ಕಾರ್ಮಿಕರಿಗೆ ಮಧ್ಯಾಹ್ನದ ವಿರಾಮ ಜಾರಿ

ದುಬೈ: ಬೇಸಿಗೆ ಕಾಲವು ಆಗಮನವಾದ ಹಿನ್ನೆಲೆಯಲ್ಲಿ ಯುಎಇ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಲು ತೊಡಗಿದೆ.‍ ಹೀಗಾಗಿ ಬಿಸಿಲು ನೇರವಾಗಿ ಮೈ ಮೇಲೆ ಬೀಳುವ ಯಾವುದೇ ಉದ್ಯೋಗಿಗಳಿಗೆ ಮತ್ತಿತರ ಹೊರಾಂಗಣ ಕಾರ್ಮಿಕರಿಗೆ ಮಧ್ಯಾಹ್ನದ ವಿರಾಮ ಜಾರಿಗೆ ಬಂದಿದೆ. ಮಧ್ಯಾಹ್ನ 12:30 ರಿಂದ ಸಂಜೆ 3 ಗಂಟೆಯ ವರೆಗೆ ಹೊರಾಂಗಣ ಕಾರ್ಮಿಕರು ಕೆಲಸ ಮಾಡುವುದಕ್ಕೆ ಇಂದಿನಿಂದ ನಿಷೇಧವಿರಲಿದೆ ಎಂದು ಯುಎಇ ಮಾನವ ಸಂಪನ್ಮೂಲ ಸಚಿವಾಲಯವು ತಿಳಿಸಿದೆ. ಜೂನ್ 15 ರಿಂದ ಸೆಪ್ಟೆಂಬರ್ 15 ರ ವರೆಗೆ ಈ ನಿಷೇಧವು ಜಾರಿಯಲ್ಲಿರಲಿದೆ. ಯಾವುದೇ … Read more

ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಸದಸ್ಯರಿಗೆ ರೂ.‌ 1 ಲಕ್ಷ ಪರಿಹಾರ : ಸಿಎಂ ಬಿ.ಎಸ್‌.ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ರೂ.‌ 1 ಲಕ್ಷ ಪರಿಹಾರವನ್ನು ಸಿಎಂ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದರು. ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಸುಮಾರು 20 ಸಾವಿರಕ್ಕೂ ಅಧಿಕ ಮಾತ್ರ ಕುಟುಂಬಗಳಿಗೆ ನೆರವು ದೊರೆಯಲಿದೆ. ಅದರಲ್ಲೂ ವಯಸ್ಕರು ಮೃತಪಟ್ಟಿದ್ದರೆ ಅವರ ಹೆಸರಿನಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಸರ್ಕಾರಕ್ಕೆ ₹250 ರಿಂದ ₹300 … Read more

ಈ ವರ್ಷದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಾಳೆಯಿಂದ ಆರಂಭ

ಬೆಂಗಳೂರು: 2021-22 ಶೈಕ್ಷಣಿಕ ವರ್ಷದ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ನಾಳೆಯಿಂದ ಆರಂಭವಾಗಲಿದೆ. ಶಾಲೆಗಳಿಗೆ ಮಕ್ಕಳ ಪ್ರವೇಶಾತಿ, ಅಧ್ಯಾಪಕರನ್ನು ಸಜ್ಜುಗೊಳಿಸುವುದು, ವಿವಿಧ ಪಠ್ಯಕ್ರಮಗಳನ್ನು ಬೋಧಿಸಲು ಸಮಯವನ್ನು ನಿಗದಿ ಪಡಿಸುವುದು ಮುಂತಾದ ಕಾರ್ಯಚಟುವಟಿಕೆಗಳು ನಾಳೆಯಿಂದ ಆರಂಭವಾಗಬಹುದು. ಶಾಲೆ ಆರಂಭಿಸುವ ಪೂರ್ವಭಾವಿ ಸಿದ್ಧತೆಗಳನ್ನು ಜೂನ್ 15 ರಿಂದ 30 ರವರೆಗೆ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ (2021-22) ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಈಗಾಗಲೇ ಪ್ರಕಟಿಸಿದೆ. 5ರಿಂದ 10ನೇ ತರಗತಿ … Read more

ಕೆಎಸ್ಆರ್‍ ಟಿಸಿ ನಷ್ಟ ಪ್ರಯಾಣಿಕರ ತಲೆಗೆ…!?

ಬೆಂಗಳೂರು: ಕೆಎಸ್ಆರ್‍ ಟಿಸಿ ಅನುಭವಿಸುತ್ತಿರುವ ಆರ್ಥಿಕ ನಷ್ಟವನ್ನು ಪ್ರಯಾಣಿಕರ ತಲೆಗೆ ಹಾಕಲಾಗುವುದೇ? ಇಂತಹ ಒಂದು ಸಾಧ್ಯತೆ ಇರುವುದು ಕಂಡು ಬರುತ್ತಿದೆ. ಕೋವಿಡ್ ಮತ್ತು ಅದರ ಜೊತೆಗೇ ಬಂದ ಲಾಕ್ಡೌನ್, ಸಾಮಾನ್ಯ ಜನರಿಗೂ, ವಿವಿಧ ಸಂಸ್ಥೆಗಳಿಗೂ, ಸರಕಾರಕ್ಕೂ ಹಣಕಾಸಿನ ಮುಗ್ಗಟ್ಟನ್ನು ತಂದಿಟ್ಟಿದೆ. ಕೆಎಸ್ಆರ್‍ ಟಿಸಿ ಕೂಡಾ ಇದಕ್ಕೆ ಹೊರತಾಗಿಲ್ಲ. ಬಸ್ಸುಗಳ ಸಂಚಾರವಿಲ್ಲದ ಕಾರಣದಿಂದ ಕೆಎಸ್ಆರ್‍ ಟಿಸಿ ಸಂಸ್ಥೆಯು ಪ್ರತಿನಿತ್ಯವೂ ಕೋಟಿಗಟ್ಟಳೆ ನಷ್ಟವನ್ನು ಅನುಭವಿಸುತ್ತಿದೆ. ಇದನ್ನು ತುಂಬಲು ಪ್ರಯಾಣದ ದರವನ್ನ ಏರಿಸುವ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ … Read more