ಬೆಂಗಳೂರು(06-10-2020): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ 2 ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.
ನಿನ್ನೆ ಸಿಬಿಐ ಅಧಿಕಾರಿಗಳು ಡಿಕೆಶಿ ಅವರ ನಿವಾಸ ಸೇರಿ 14 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಮಹತ್ವದ ದಾಖಲೆಯನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಡಿಕೆಶಿ ಅವರ ಮೇಲೆ ಸಿಬಿಐ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಆದಾಯಕ್ಕೂ ಮೀರಿದ ಆಸ್ತಿ ಹೊಂದಿದ್ದು, ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಡಿಕೆಶಿ ವಿರುದ್ಧದ ಆರೋಪ ಸಾಬೀತಾದರೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಚಿದ್ರವಾದಂತೆ ಎಂಬ ಅಭಿಪ್ರಾಯವನ್ನು ರಾಜಕೀಯ ತಜ್ಞರು ಹೇಳುತ್ತಿದ್ದಾರೆ.