ಡ್ರಗ್ಸ್ ತನಿಖೆ ವಿವಾದ; ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(04-10-2020): ಡ್ರಗ್ ಜಾಲ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರ ವರ್ಗಾವಣೆ ವಿವಾದಕ್ಕೆ ಆಸ್ಪದವಾಗಿದ್ದು, ಈಗ ಅವರ ವರ್ಗಾವಣೆಗೆ ತಡೆ ಹಿಡಿಯಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರಿಗೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಅನುಶ್ರೀ ಪ್ರಕರಣದಲ್ಲಿ ರಾಜಕೀಯ ವ್ಯಕ್ತಿಗಳ ಕೈವಾಡದ ಬಗ್ಗೆ ಮಾಹಿತಿ ಹೊರಬಿದ್ದಿತ್ತು. ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಶಿವಪ್ರಕಾಶ್ ವರ್ಗಾವಣೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ಕೇಳಿಬಂದಿತ್ತು. ಇದೀಗ ಅವರ ವರ್ಗಾವಣೆಗೆ ತಡೆ ಹಿಡಿಯಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು